About the Author

ಮಹಾಭಾರತವನ್ನು ಸರಳಗನ್ನಡದಲ್ಲಿ ಹೇಳುವ ವಚನ ಭಾರತದ ಮೂಲಕ ಕನ್ನಡ ಸಾಹಿತ್ಯದಲ್ಲಿ ಚಿರಪರಿಚಿತರಿರುವ ಎ.ಆರ್. ಕೃಷ್ಣಶಾಸ್ತ್ರಿಗಳು ಪ್ರಬುದ್ಧ ಕರ್ನಾಟಕ ಪತ್ರಿಕೆಯ ಸ್ಥಾಪಕರಾಗಿ, ಸಂಪಾದಕರಾಗಿ ನೀಡಿದ ಕೊಡುಗೆ ಅಮೂಲ್ಯ. 1890ರ ಫೆಬ್ರುವರಿ 12ರಂದು ಮೈಸೂರಿನಲ್ಲಿ ಜನಿಸಿದರು. ತಂದೆ ಅಂಬಳೆ ರಾಮಕೃಷ್ಣಶಾಸ್ತ್ರಿ ತಾಯಿ ವೆಂಕಮ್ಮ. ತಂದೆಯಿಂದ ಸಂಸ್ಕೃತ ವ್ಯಾಸಂಗ ಮಾಡಿದ ಶಾಸ್ತ್ರಿಗಳು ವೆಸ್ಲಿಯನ್ ಪ್ರೌಢಶಾಲೆಯಲ್ಲಿ ಶಿಕ್ಷಣ ಮುಗಿದ ಮೇಲೆ ಬಿ.ಎ. ಪದವಿ (1913)  ಮತ್ತು ಮದರಾಸಿನಲ್ಲಿ ಕನ್ನಡ ಎಂ.ಎ. (1915) ಪದವಿ ಪಡೆದರು.

ಪ್ರಾರಂಭದಲ್ಲಿ ಡೆಪ್ಯೂಟಿ ಕಮೀಷನರ್ ಆಫೀಸಿನಲ್ಲಿ ಅನಂತರ ಓರಿಯಂಟಲ್ ಲೈಬ್ರರಿಯಲ್ಲಿ ಕೆಲಸ ಮಾಡಿದ ಅವರು ನಂತರ 1916ರಲ್ಲಿ ಸೆಂಟ್ರಲ್ ಕಾಲೇಜಿನಲ್ಲಿ ಅಧ್ಯಾಪಕರಾಗಿ ನೇಮಕಗೊಂಡರು. 1939ರಲ್ಲಿ ಕನ್ನಡ ಪ್ರಾಧ್ಯಾಪಕರಾದ ಅವರು 1946ರಲ್ಲಿ ನಿವೃತ್ತರಾದರು. ಅನಂತರ ಬೆಂಗಳೂರಿನ ನ್ಯಾಷನಲ್ ಕಾಲೇಜಿನಲ್ಲಿ ಗೌರವ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದರು.

ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಪರಿಷತ್ಪತ್ರಿಕೆ ಮತ್ತು ನಿಘಂಟು ಸಂಪಾದಕರೂ, ಅಧ್ಯಕ್ಷರಾಗಿ ಅಮೋಘ ಸೇವೆ ಸಲ್ಲಿಸಿದ್ದಾರೆ. 1918೮ರಲ್ಲಿ ಬೆಂಗಳೂರಿನಲ್ಲಿ ಕರ್ನಾಟಕ ಸಂಘ ಸ್ಥಾಪಿಸಿದರು. ಪ್ರಬುದ್ಧ ಕರ್ನಾಟಕ ಸಂಪಾದಕರಾದರು. ಮೈಸೂರು ವಿಶ್ವವಿದ್ಯಾನಿಲಯದ ಕನ್ನಡ ಗ್ರಂಥಪ್ರಕಾಶನ ಸಮಿತಿ ಅಧ್ಯಕ್ಷ (1942-45) ಆಗಿದ್ದರು. ಮೈಸೂರು ವಿಶ್ವವಿದ್ಯಾನಿಲಯದ ಇಂಗ್ಲಿಷ್-ಕನ್ನಡ ನಿಘಂಟು ಸಮಿತಿಯಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿದರು.

ಎ.ಆರ್. ಕೃಷ್ಣಶಾಸ್ತ್ರಿಗಳಿಗೆ ಮೈಸೂರು ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ (1960) ದೊರೆತಿದೆ. ಇವರ ಬಂಕಿಂಚಂದ್ರ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ (1961) ಬಂದಿದೆ. ೧೯೪೧ರಲ್ಲಿ ಹೈದರಾಬಾದಿನಲ್ಲಿ ನಡೆದ 26ನೇ ಕನ್ನಡ ಸಾಹಿತ್ಯ ಸಮ್ಮೇಳನ (1941 )ಅಧ್ಯಕ್ಷತೆ ವಹಿಸಿದ್ದರು. 1956ರಲ್ಲಿ ಅಭಿವಂದನಾ ಗ್ರಂಥ ಸಮರ್ಪಣೆ ಮಾಡಲಾಗಿತ್ತು. ಶಾಸ್ತ್ರಿಗಳು 1968ರ ಫೆಬ್ರುವರಿ 1ರಂದು ನಿಧನರಾದರು.

ಹರಿಶ್ಚಂದ್ರಕಾವ್ಯ ಸಂಗ್ರಹ, ವಚನ ಭಾರತ, ನಾಗಮಹಾಶಯ (ಅನುವಾದ), ನಿಬಂಧಮಾಲಾ (ಅನುವಾದ), ಭಾಷಣಗಳು ಮತ್ತು ಲೇಖನಗಳು (ಬಿಡಿವಿಚಾರಗಳು), ಬಂಕಿಮಚಂದ್ರ, ಶ್ರೀ ರಾಮಕೃಷ್ಣ ಪರಮಹಂಸರ ಜೀವನಚರಿತ್ರೆ, ಕನ್ನಡ ಕೈಪಿಡಿ (ಭಾಗ-೧), ನಯಸೇನನ ಧರ್ಮಾಮೃತ ಇತ್ಯಾದಿ.

ಇವರು 01-02-1968ರಂದು ನಿಧನರಾದರು.

ಎ.ಆರ್.  ಕೃಷ್ಣಶಾಸ್ತ್ರಿ

(12 Feb 1890-01 Feb 1968)

Awards

ABOUT THE AUTHOR