About the Author

ಅಕ್ಷತಾ ಕೃಷ್ಣಮೂರ್ತಿಯವರು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬೆಲೆಕೇರಿಯಲ್ಲಿ 02 ನವೆಂಬರ್1981 ರಲ್ಲಿ ಜನಿಸಿದರು. ಉತ್ತರ ಕನ್ನಡ ಜಿಲ್ಲೆಯ ಅತಿ ಹೆಚ್ಚು ಅರಣ್ಯ ಹೊಂದಿರುವ ಹಾಗೂ ಮೂಲಭೂತ ಸೌಕರ್ಯಗಳ ಕೊರತೆ ಎದುರಿಸುತ್ತಿರುವ ಹಿಂದುಳಿದ ಜೊಹಿಡಾ ತಾಲೂಕಿನ ಹುಲಿ ಸಂರಕ್ಷಿತ ಪ್ರದೇಶದ ಅಣಶಿಯಲ್ಲಿ ಶಾಲಾ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಶಿಕ್ಷಕಿ ವೃತ್ತಿಯ ಜೊತೆಯಲ್ಲಿ ಕನ್ನಡದ ಹಲವಾರು, ದಿನ ಪತ್ರಿಕೆ ,ವಾರಪತ್ರಿಕೆ, ಪಾಕ್ಷಿಕಪತ್ರಿಕೆ ಹಾಗೂ ಮಾಸಿಕ ಪತ್ರಿಕೆಗಳಲ್ಲಿ ಅಂಕಣಗಳನ್ನು ಬರೆಯುವ ಮೂಲಕ ಹವ್ಯಾಸಿ ಬರಹಗಾರರಾಗಿದ್ದಾರೆ. ಹಲವಾರು ಕೃತಿ, ಕವನ ಸಂಕಲನಗಳನ್ನು ರಚಿಸುವ ಮೂಲಕ ಕನ್ನಡ ಸಾಹಿತ್ಯಕ್ಕೆ ತಮ್ಮದೇ ಕೊಡುಗೆ ನೀಡಿದ್ದಾರೆ. ಅವರ ಸಾಹಿತ್ಯ ಸೇವೆಗೆ ಕ.ಸಾ.ಪದಿಂದ 2020ನೇ ಸಾಲಿನ ಮಯೂರವರ್ಮ ಸಾಹಿತ್ಯ ಪ್ರಶಸ್ತಿ ದೊರೆತಿದೆ. ಅವರ ಪ್ರಕಟಿತ ಕೃತಿಗಳು ‘ಹನ್ನೆರಡು ದಡೆ ಬೆಲ್ಲ’(ಕವನ ಸಂಕಲನ-2013), ‘ಹಾಲಕ್ಕಿ ಒಕ್ಕಲಿಗರು(ಜನಾಂಗೀಯ ಬರಹ-2013), ‘ಮಧುರ ಚೆನ್ನ(ವ್ಯಕ್ತಿ ಪರಿಚಯ-2014), ‘ಕೋಳ್ಗಂಬ (ಕವನ ಸಂಕಲನ-2016)’

ಅಕ್ಷತಾ ಕೃಷ್ಣಮೂರ್ತಿ

(02 Nov 1981)

BY THE AUTHOR