About the Author

ಲೇಖಕ ಪ್ರೊ. ಬಿ. ಗಂಗಾಧರ ಮೂರ್ತಿ ಅವರು ಮೂಲತಃ  ಹೊಳೆನರಸೀಪುರದವರು. ಮೈಸೂರು ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವೀಧರರು. ಸುಮಾರು 30 ಬೊಧನೆ ಮಾಡಿದವರು. ’’ನವ್ಯ ಕತೆಗಳು” ಅವರು ಬರೆದ ವಿಮರ್ಶಾ ಲೇಖನಕ್ಕೆ ಕನ್ನಡ ಸಾಹಿತ್ಯ ಪರಿಷತ್ತು ಪ್ರಶಸ್ತಿ ನೀಡಿ ಗೌರವಿಸಿದೆ. ಅನುವಾದ ಕ್ಷೇತ್ರದಲ್ಲಿ ಇವರ ಸೇವೆ ಗಮನಿಸಿ ಕುವೆಂಪು ಭಾಷಾ ಭಾರತಿ ಪ್ರಾಧಿಕಾರವು ಪ್ರಶಸ್ತಿ ನೀಡಿ ಗೌರವಿಸಿದೆ. ಸೂಫಿ ಕಲ್ಚರ್ ಸಂಪಾದಕ  ಸಮಿತಿಯಲ್ಲಿ ಪ್ರವಾಚಕರಾಗಿದ್ದರು. ಭಾರತ ಜ್ಞಾನ-ವಿಜ್ಞಾನ ಸಮಿತಿ ಪ್ರಕಟಿಸುತ್ತಿದ್ದ ‘ಟೀಚರ್’ ಮಾಸಿಕದ ಮುಖ್ಯ ಸಂಪಾದಕರಾಗಿದ್ದರು. ಕರ್ನಾಟಕದ ಗೌರಿಬಿದನೂರು ನಗರದಲ್ಲಿ ವಾಸವಿದ್ದು, ವಿದುರಾಶ್ವತ ಫ್ರೀಡಂ ಮೆಮೊರಿಯಲ್ ಮ್ಯೂಜಿಯಂ ಸಂಸ್ಥೆಯ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. 

ಬಿ. ಗಂಗಾಧರಮೂರ್ತಿ