About the Author

ಐತಿಹಾಸಿಕ ಕಾದಂಬರಿಗಳ ಮೂಲಕ ಜನಪ್ರಿಯರಾಗಿರುವ ಲೇಖಕ ಬಿ.ಎಲ್. ವೇಣು. ರಂಗಭೂಮಿ ಹಿನ್ನೆಲೆಯ ಅವರು ಇತಿಹಾಸ ಮತ್ತು ಸಂಶೋಧನೆಗಳಲ್ಲಿ ಪ್ರೀತಿ ಹೊಂದಿದ್ದಾರೆ.

ಬಣ್ಣಗಳು, ದೊಡ್ಡ ಮನೆ, ಪ್ರೇಮ ಮದುವೆ ಮತ್ತು ಶೀಲ, ನೀಲವರ್ಣ, ದಲಿತಾವತಾರ, ಬಣ್ಣದ ಗೊಂಬಿ (ಕಥಾ ಸಂಕಲನಗಳು), ಪರಾಜಿತ, ಪ್ರೇಮಪರ್ವ, ಅಜೇಯ, ಬೆತ್ತಲೆ ಸೇವೆ, ಅತಂತ್ರರು, ಗಂಡುಗಲಿ ಮದಕರಿ ನಾಯಕ, ರಾಜಾ ಬಿಚ್ಚುಗತ್ತಿ ಭರಮಣ್ಣನಾಯಕ, ಕಲ್ಲರಳಿ ಹೂವಾಗಿ, ಕ್ರಾಂತಿಯೋಗಿ ಮರುಳಸಿದ್ದ, ಹೆಬ್ಬುಲಿ ಹಿರೇಮದಕರಿನಾಯಕ (ಮುಂತಾದ 26 ಕಾದಂಬರಿಗಳು), ಸಹೃದಯಿ, ಬೇರುಬಿಟ್ಟವರು, ಶೋಧನೆ, ವೀರವನಿತೆ ಓಬವ್ವ, ಕ್ರಾಂತಿ (ಮಿನಿ ಕಾದಂಬರಿಗಳು), ಯಮಲೋಕದಲ್ಲಿ ಮಾನವ, ಭೂಲೋಕಕ್ಕೆ ಬಂದ ಬಸವಣ್ಣ, ರಾಜಾ ವೀರ ಗಂಡುಗಲಿ ಮದಕರಿನಾಯಕ, ಹೋರಾಟ (ನಾಟಕಗಳು) ಸೇರಿ ಐವತ್ತಕ್ಕೂ ಹೆಚ್ಚು ಕೃತಿಗಳನ್ನು ಅವರು ಪ್ರಕಟಿಸಿದ್ದಾರೆ. ಪರಾಜಿತ, ಪ್ರೇಮಪರ್ವ, ಅಜೇಯ, ದೊಡ್ಡಮನೆ ಎಸ್ಟೇಟ್ ಸೇರಿ ಒಂಬತ್ತು ಕೃತಿಗಳು ಚಲನಚಿತ್ರಗಳಾಗಿವೆ. ಅವರು  ಕನ್ನಡ ಚಿತ್ರಗಳಿಗೆ ಚಿತ್ರಕಥೆ ಮತ್ತು ಸಂಭಾಷಣೆ ಕೂಡ ಬರೆದಿದ್ದಾರೆ.

ಬಿ.ಎಲ್.ವೇಣು

(05 May 1945)

ABOUT THE AUTHOR