About the Author

ಹಾಸನದಲ್ಲಿ ನೆಲೆಸಿರುವ ಬಾನು ಮುಷ್ತಾಕ್ ಅವರು ಲೇಖಕಿಯಾಗಿ, ಪತ್ರಕರ್ತೆಯಾಗಿ, ನ್ಯಾಯವಾದಿಯಾಗಿ ಕ್ರಿಯಾಶೀಲರಾಗಿದ್ದಾರೆ. ಐದು ಕಥಾ ಸಂಕಲನ ಮತ್ತು ಒಂದು ಪ್ರಬಂಧ ಸಂಕಲನ ಪ್ರಕಟಿಸಿರುವ ಅವರು ಕೌಟುಂಬಿಕ ತಡೆ ಕಾಯ್ದೆಯನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಫಾರಸಿ ಕೃತಿ ತಾರೀಖ್ -ಎ-ಫೆರಿಸ್ತಾವನ್ನು ಉರ್ದುವಿನಿಂದ ಕನ್ನಡೀಕರಿಸಿದ್ದಾರೆ. ಕರಿನಾಗರಗಳು’ ಕತೆಯನ್ನು ಆಧರಿಸಿ ಗಿರೀಶ್ ಕಾಸರವಳ್ಳಿ ಅವರು  ’ಹಸೀನಾ’ ಚಿತ್ರ ನಿರ್ದೇಶಿಸಿದ್ದರು. ಬಾನು ಅವರ ಅನೇಕ ಕತೆಗಳು ಹಿಂದಿ, ಇಂಗ್ಲಿಷ್, ಉರ್ದು, ಮಲಯಾಳಂ, ತಮಿಳು ಭಾಷೆಗಳಿಗೆ ಅನುವಾದಗೊಂಡಿವೆ.
1954 ಏಪ್ರಿಲ್ 03 ರಂದು ಹಾಸನ ಜಿಲ್ಲೆಯ ವಲಭಬಾಯಿಯಲ್ಲಿ ಜನಿಸಿದರು. ಅವರು ಬರೆದ 'ಬೆಂಕಿಮಳೆ' ಕತೆ ಹಸೀನ ಹೆಸರಲ್ಲಿ ಚಲನಚಿತ್ರವಾಗಿ 3 ರಾಷ್ಟ್ರಪ್ರಶಸ್ತಿಗಳಿಸಿದೆ.  ’ಕುಬ, ಬಡವರ ಮಗಳು ಹೆಣ್ಣಲ್ಲ’ ಅವರ ಕಾದಂಬರಿ ರಚಿಸಿದ್ದಾರೆ. ಲಂಕೇಶ್ ಪತ್ರಿಕೆಗೆ ಜಿಲ್ಲಾ ವರದಿಗಾರರಗಾಗಿ 9 ವರ್ಷ ಸೇವೆ ಸಲ್ಲಿಸಿದ್ದಾರೆ. “ಹೆಜ್ಜೆ ಮೂಡಿದ ಹಾದಿ, ಬೆಂಕಿಮಳೆ, ಎದೆಯ ಹಣತೆ” ಕಥಾಸಂಕಲನ ಹೊರತಂದಿದ್ದು, ಅವರ ಸಾಹಿತ್ಯ ಸೇವೆಗೆ ಹಲವಾರು ಪ್ರಶಸ್ತಿಗಳು ಲಭಿಸಿವೆ.

’ಕರ್ನಾಟಕ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ, ಪದ್ಮಭೂಷಣ ಬಿ.ಸರೋಜದೇವಿ ಸಾಹಿತ್ಯ ಪ್ರಶಸ್ತಿ, ಒಮ್ಮೆ ಹೆಣ್ಣಾಗು ಪ್ರಭುವೆ ನಾಟಕ ರೂಪಾಂತರಕ್ಕೆ ಇಂಟರ್ ನ್ಯಾಷನಲ್ ವುಮನ್ ಫಾರ್‌ ರೇಡಿಯೋ ಆ್ಯಂಡ್ ಟೆಲಿವಿಷನ್ ಬಹುಮಾನ, ಕರ್ನಾಟಕ ಕಲ್ಪವಲ್ಲಿ ಪ್ರಶಸ್ತಿ, ಕರ್ನಾಟಕ ಲೇಖಕಿಯರ ಸಂಘದ ಎಚ್.ವಿ. ಸಾವಿತ್ರಮ್ಮ ದತ್ತಿನಿಧಿ ಬಹುಮಾನ ಹಾಗೂ ಗುಡಿಬಂಡೆ ಪೂರ್ಣಿಮಾ ದತ್ತಿನಿಧಿ ಬಹುಮಾನ, ಶ್ರವಣಬೆಳಗೊಳ ಮಹಾಮಸ್ತಕಾಭಿಷೇಕ ಪ್ರಶಸ್ತಿ, ಸುಧಾಮೂರ್ತಿ ಪ್ರಶಸ್ತಿಗಳು ಅವರನ್ನರಸಿವೆ. ಅವರ ಅನೇಕ ಕಥೆಗಳು ಹಿಂದಿ ಮಲಯಾಳಿ ಇತ್ಯಾದಿಗೆ ಅನುವಾದಗೊಂಡಿವೆ.

 

ಬಾನು ಮುಷ್ತಾಕ್

(03 Apr 1954)

BY THE AUTHOR