About the Author

ರಾಮಚಂದ್ರನ್ ಅವರು ಜನಿಸಿದ್ದು (ಜ ೧೯೩೬) ಮೈಸೂರು ಜಿಲ್ಲೆಯ ಚಿಲ್ಕುಂದ ಗ್ರಾಮದಲ್ಲಿ. ಮೈಸೂರು ವಿಶ್ವವಿದ್ಯಾಲಯದಿಂದ ಎಂ.ಎ. ಪದವಿ, ಅಮೆರಿಕೆಯ ಮಯಾಮಿ ವಿಶ್ವವಿದ್ಯಾಲಯದಿಂದ ಪಿಎಚ್. ಡಿ. ಪದವಿ. ಕರ್ನಾಟಕ, ಮಹಾರಾಷ್ಟ್ರ, ಅಮೆರಿಕ, ಸೌದಿ ಅರೇಬಿಯಾ, ಸೋಮಾಲಿಯಾಗಳಲ್ಲಿ ಅಧ್ಯಾಪಕರಾಗಿ ಕಾರ್‍ಯ ನಿರ್ವಹಿಸಿದ್ದಾರೆ. ೧೯೯೬ರಲ್ಲಿ ಮಂಗಳೂರು ವಿಶ್ವವಿದ್ಯಾಲಯದಿಂದ ಅಧ್ಯಾಪಕರಾಗಿ ನಿವೃತ್ತಿ.

ಸಾಹಿತ್ಯ ವಿಮರ್ಶೆ, ವಸಾಹತೋತ್ತರ ಚಿಂತನೆ, ತೌಲನಿಕ ಸಾಹಿತ್ಯ, ಪರಂಪರೆ ಪ್ರತಿರೋಧ, ಎಡ್ವರ್ಡ್ ಸೈದ್, ಬಯಲುರೂಪ, ರಕ್ತ-ರೂಪಣೆ, ಹೊಸ ಮಡಿಯ ಮೇಲೆ ಚದುರಂಗ, ಗಿರೀಶ ಕಾರ್ನಾಡರ ಚಾರಿತ್ರಿಕ ನಾಟಕಗಳು ವಿಮರ್ಶಾ ಕೃತಿಗಳು. ಶೋಧ ಕಾದಂಬರಿ, ಕಸಾಂದ್ರ ಕಥಾ ಸಂಕಲನ.

ಇನಾಂದಾರ್ ಪ್ರಶಸ್ತಿ, ವರ್ಧಮಾನ ಪ್ರಶಸ್ತಿ, ಗೌರೀಶ ಕಾಯ್ಕಿಣಿ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.

ಸಿ.ಎನ್. ರಾಮಚಂದ್ರನ್