About the Author

ಲೇಖಕ ಸಿ.ಎಸ್.ಭೀಮರಾಯ  ಅವರು ಹೊಸ ತಲೆಮಾರಿನ ಕವಿ ಮತ್ತು ವಿಮರ್ಶಕ. 1981ರಲ್ಲಿ  ಜನನ, ಕಲಬುರ್ಗಿ ವಿಶ್ವವಿದ್ಯಾಲಯದಿಂದ ಆಂಗ್ಲ ಭಾಷೆಯಲ್ಲಿ ಸ್ನಾತಕೋತ್ತರ ಪದವೀಧರರು. ಇಂಗ್ಲಿಷ್ ಭಾಷೆ ಉಪನ್ಯಾಸಕರು. ಈವರೆಗೆ ಕನ್ನಡದಲ್ಲಿ ಐದು ಮತ್ತು ಆಂಗ್ಲ ಭಾಷೆಯಲ್ಲಿ ನಾಲ್ಕು ಕೃತಿಗಳನ್ನು ಪ್ರಕಟಿಸಿದ್ದಾರೆ. ಅರವತ್ತಕ್ಕೂ ಹೆಚ್ಚು ವಿಮರ್ಶಾ ಲೇಖನಗಳು ಮತ್ತು ಇಪ್ಪತ್ತಕ್ಕೂ ಹೆಚ್ಚು ಕವಿತೆಗಳು ಪ್ರಮುಖ ಪತ್ರಿಕೆಗಳಲ್ಲಿ ಪ್ರಕಟವಾಗಿವೆ.

 ಕಾವ್ಯ, ಪ್ರಬಂಧ ಮತ್ತು ವಿಮರ್ಶೆಗಳಲ್ಲಿನ ಸಂವೇದನೆಗಳು, ಧ್ಯೇಯ-ಧೋರಣೆಗಳು ಕುಸಿಯುತ್ತಿರುವ ಸಾಮಾಜಿಕ ಮೌಲ್ಯಗಳ ಬಗೆಗಿನ ತೀವ್ರ ಕಾಳಜಿ, ಅನ್ಯಾಯದ ವಿರುದ್ಧ ಸಿಡಿದೇಳುವ ಆಕ್ರೋಶ, ಸಿಟ್ಟು, ವ್ಯಂಗ್ಯ, ಬಂಡಾಯ-ಅವರ ಬರವಣಿಗೆಯಲ್ಲಿ ಗಮನ ಸೆಳೆಯುತ್ತವೆ. 

ಕೃತಿಗಳು: ನೆಲದ ಮಗನ ಹಾಡು, ಸಂಗಮ (ಲೇಖನಗಳ ಸಂಗ್ರಹ) , ಸಂವರ್ಧನ (ಲೇಖನಗಳ ಸಂಗ್ರಹ), ಸಂವೇದನೆ (ವಿಮರ್ಶೆ ಲೇಖನಗಳ ಸಂಕಲನ), ಅನ್ವೇಷಣೆ (ವಿಮರ್ಶೆ ಲೇಖನಗಳು), ಆರೋಹಣ (ವಿಮರ್ಶಾ ಲೇಖನಗಳ ಸಂಗ್ರಹ). 

 

ಸಿ.ಎಸ್.ಭೀಮರಾಯ (ಸಿಎಸ್ಬಿ)