About the Author

ಹವ್ಯಾಸಿ ದ್ವಿಭಾಷಾ ಬರಹಗಾರ ನಾಗೇಶ್ ಕುಮಾರ್ ಸಿ.ಎಸ್‌. ಅವರು ಜನಿಸಿದ್ದು ಬೆಂಗಳೂರಿನಲ್ಲಿ. ಸಿವಿಲ್ ಇಂಜಿನಿಯರಿಂಗ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಚೆನ್ನೈ ನಗರದ ಬಹುರಾಷ್ಟ್ರೀಯ ಸಂಸ್ಥೆಯೊಂದರಲ್ಲಿ ಮ್ಯಾನೇಜರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರು ಬರೆದ ಸಣ್ಣ ಕತೆ, ಕಿರು ಕಾದಂಬರಿಗಳು ತರಂಗ, ತುಷಾರ ಉತ್ಥಾನ, ಸುಧಾ, ಕರ್ಮವೀರ ಸೇರಿದಂತೆ ಹಲವಾರು ನಿಯತಕಾಲಿಕಗಳಲ್ಲಿ ಪ್ರಕಟವಾಗಿದೆ. ರಕ್ತಚಂದನ, ನಾಳೆಯನ್ನು ಗೆದ್ದವನು ಇವರ ಪ್ರಮುಖ ಕೃತಿಗಳು. ‘ಕರಾಳ ಗರ್ಭ’ ಅವರ ಆಡಿಯೋ ಪುಸ್ತಕ ಇತ್ತೀಚೆಗೆ ಬಿಡುಗಡೆಗೊಂಡಿದ್ದು ಕೇಳುಗರಿಂದ ಮೆಚ್ಚುಗೆ ಪಡೆದಿದೆ.

ಸಿ.ಎಸ್. ನಾಗೇಶ್ ಕುಮಾರ್