About the Author

ಚಂದ್ರಶೇಖರ್ ಮಂಡೆಕೋಲು- ತುಳುನಾಡಿನ ನವೀನ ಸಾಹಿತ್ಯದ ಭರವಸೆಯ ಬರಹಗಾರ. ಸಾಹಿತ್ಯ ಹಾಗೂ ಪತ್ರಿಕೋದ್ಯಮದಲ್ಲಿ ಹೊಸ ಸಾಧ್ಯತೆಗಳ ಹುಡುಕಾಟದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ ಚಂದ್ರಶೇಖರ್, ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದವರು. ಸುಳ್ಯದ ನೆಹರೂ ಸ್ಮಾರಕ ಕಾಲೇಜಿನಲ್ಲಿ ಪದವಿ, ಮಂಗಳೂರು ವಿವಿಯಲ್ಲಿ ಕನ್ನಡದಲ್ಲಿ ಸ್ನಾನಕೋತರ ಪದವಿ ಪಡೆದಿದ್ದಾರೆ. ವೃತ್ತಿಯಲ್ಲಿ ಪತ್ರಕರ್ತರಾಗಿರುವ ಅವರು ಉದಯವಾಣಿ, ವಿಜಯವಾಣಿ ಪತ್ರಿಕೆಗಳಲ್ಲಿ ಉಪಸಂಪಾದಕರಾಗಿ ಕಾರ್ಯನಿರ್ವಹಿಸಿದ್ದು, ಸದ್ಯ ನ್ಯೂಸ್ 18 ಸುದ್ದಿವಾಹಿನಿಯಲ್ಲಿ ಮುಖ್ಯ ಉಪಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಾಲೇಜು ದಿನಗಳಿಂದಲೂ ಬರಹದ ಗೀಳು, ತುಳು ಸಂಸ್ಕೃತಿ ಕುರಿತ ಅಧ್ಯಯನಪೂರ್ಣ ‘ಅನ್ವೇಷಣೆ’ ಚೊಚ್ಚಲ ಕೃತಿಗೆ ತುಳು ಸಾಹಿತ್ಯ ಅಕಾಡೆಮಿಯ ಪುಸ್ತಕ ಬಹುಮಾನ ಪಡೆದಿದ್ದಾರೆ. ಹಿರಿಯ ಯಕ್ಷಗಾನ ಕಲಾವಿದ ಪುತ್ತೂರು ಶೀನಪ್ಪಭಂಡಾರಿ ಅವರ ಜೀವನಚರಿತ್ರೆ ‘ಯಕ್ಷಭಂಡಾರಿ’, ಭಾರತದ ಮೊದಲ ಮಹಿಳಾ ವೈದ್ಯೆ ಆನಂದಿಯವರ ಕುರಿತ ಅಗ್ನಿದಿವ್ಯದ ಹುಡುಗಿ, ಪ್ರಕಟಿತ ಕೃತಿಗಳು. ಕರ್ನಾಟಕ ಹಾಗೂ ಮಹಾರಾಷ್ಟ್ರದಲ್ಲಿ ಕ್ಷೇತ್ರಕಾರ್ಯ ನಡೆಸಿ ರಚಿಸಿದ ಈ ಕೃತಿಗೆ 2017ನೇ ಸಾಲಿನ ಕರ್ನಾಟಕ ಸಾಹಿತ್ಯ ಅಕಾಡೆಮಿಯ ದತ್ತಿನಿಧಿ ಬಹುಮಾನ ಲಭಿಸಿದೆ.

 

ಚಂದ್ರಶೇಖರ ಮಂಡೆಕೋಲು

Awards