About the Author

ಲೇಖಕ ಡಾ. ಸಿ. ಚಿ. ನಿಂಗಣ್ಣ ಅವರು ಮೂಲತಃ ಕಲಬುರಗಿಯವರು. ಗುಲಬರ್ಗಾ ವಿಶ್ವವಿದ್ಯಾಲಯದಿಂದ ಕನ್ನಡದಲ್ಲಿ ಸ್ನಾತಕೋತ್ತರ ಪದವಿಯನ್ನು ಪ್ರಥಮ ದರ್ಚೆಯಲ್ಲಿ ಪಡೆದರು. “ಕಲಬುರಗಿ ಜಿಲ್ಲೆಯ ಜಾತ್ರೆಗಳು ಒಂದು ಜಾನಪದೀಯ ಅಧ್ಯಯನ” ವಿಷಯವಾಗಿ ಗುಲಬರ್ಗಾ ವಿಶ್ವವಿದ್ಯಾಲಯಕ್ಕೆ ಮಹಾಪ್ರಬಂಧ ಸಲ್ಲಿಸಿ, ಪಿಎಚ್ ಡಿ ಪಡೆದರು. ಸದ್ಯ, ಕಲಬುರಗಿಯ  ಸಂತ ಜೋಸೆಫ್ ಪಿ.ಯು. ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರು. ಕ.ಸಾ.ಪ. ಸಾಹಿತ್ಯ ಸಂಚಾಲಕರಾಗಿದ್ದು, ವಚನಸಾಹಿತ್ಯ, ಜಾನಪದ ಹಾಗೂ ವಿಮರ್ಶೆ ವಲಯದಲ್ಲಿ ವಿಶೇಷ ಆಸಕ್ತಿ.

ಕೃತಿಗಳು: ಕಲಬುರಗಿ ಜಿಲ್ಲೆಯ ಜಾತ್ರೆಗಳು ಒಂದು ಜಾನಪದೀಯ ಅಧ್ಯಯನ (ಮಹಾಪ್ರಬಂಧ) ಕನ್ನಡ ವ್ಯಾಕರಣ, ಬಡವರ ಬಂಗಾರ, ಶಿವಾಜಿ, ಹಬ್ಬಗಳು, ಸ್ಪಂದನ, ಬಸವಣ್ಣನವರ ವಚನಗಳಲ್ಲಿ ಸಮಾಜೋಧಾರ್ಮಿಕ ಪ್ರಜ್ಞೆ ಸಾಮಾಜಿಕ ಪರಿವರ್ತನೆ ಹರಿಕಾರ-ಡಿ.ದೇವರಾಜ ಅರಸು, ಬಾಡದ ಮನಸು, ಸಮಾಜವಾದಿ ಎಸ್. ಬಂಗಾರಪ್ಪ, ಜಾಗತೀಕರಣ ಜಾನಪದ, ಜಾನಪದ ಸಾಹಿತ್ಯ ಸಂಗಾತಿ, ಜಾಗತಿಕರಣ ಜಾತ್ರೆಗಳು, ಕನ್ನಡ ಸಾಹಿತ್ಯ ಸಂಸ್ಕತಿಕೋಶ, ಕಡಗೀಲು ಬಂಡಿಗಾಧಾರ, ವೈಚಾರಿಕತೆ ಮತ್ತು ಸಾಹಿತ್ಯ, ಸರ್ವೋತ್ತಮ ಪ್ರಮುಖ ಕೃತಿಗಳಾಗಿವೆ. ಐವತ್ತಕ್ಕೂ ಹೆಚ್ಚು ಲೇಖನಗಳು, 30ಕ್ಕೂ ಹೆಚ್ಚು ಕೃತಿಗಳು  ರಚಿಸಿದ್ದು, ವಿಚಾರ ಸಂಕಿರಣ ಮತ್ತು ಸಾಹಿತ್ಯ ಸಮ್ಮೇಳನಗಳಲ್ಲಿ ಹಲವು ಉಪನ್ಯಾಸ ಮಂಡಿಸಿದ್ದು, ಹಾಗೆಯೇ 100 ಕ್ಕೂ ಹೆಚ್ಚು ಆಕಾಶವಾಣಿಯಲ್ಲಿ ಕಾರ್ಯಕ್ರಮ ಕೊಟ್ಟಿದ್ದಾರೆ. 

ಪ್ರಶಸ್ತಿ-ಪುರಸ್ಕಾರಗಳು: ಇವರಿಗೆ ನೂರಂದೇಶ್ವರ ರಾಜ್ಯಮಟ್ಟದ ಗೌರವ ಪ್ರಶಸ್ತಿ, ಗುಲಬರ್ಗಾ ವಿಶ್ವವಿದ್ಯಾಲಯದಿಂದ ರಾಜ್ಯೋತ್ಸವ ಪ್ರಶಸ್ತಿ, ಇವರ ಒಟ್ಟು ಜಾನಪದ ಸಂಶೋಧನೆಯ ಸಾಧನೆಗೆ ಸಗರ ಸೌರಭ ರಾಜ್ಯ ಪ್ರಶಸ್ತಿ ಸೇರಿದಂತೆ ಇತರೆ ಸಂಘ ಸಂಸ್ಥೆಗಳಿಂದ ಅನೇಕ ಗೌರವ ಸನ್ಮಾನಗಳು ಲಭಿಸಿವೆ. 

 

ಚಿ.ಸಿ. ನಿಂಗಣ್ಣ