About the Author

ಚಿಂತಾಮಣಿ ಕೊಡ್ಲೆಕೆರೆ ಅವರು 1961 ಜನವರಿ 13ರಂದು ಗೋಕರ್ಣ ಬಳಿಯ ಅಘನಾಶಿನಿ ಗ್ರಾಮದಲ್ಲಿ ಜನಿಸಿದರು. ತಂದೆ ಎಂ.ಎ. ಭಟ್ಟ. ತಾಯಿ ರಾಧೆ. ಹಿರೇಗುತ್ತಿಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ಇವರು ಧಾರವಾಡದಲ್ಲಿ ಬಿಎಸ್‌ಸಿ ಪದವಿ ಪಡೆದರು. ತ್ರಿವೆಂಡ್ರಮ್‌ನಲ್ಲಿ ಟೆಲಿ ಕಮ್ಯುನಿಕೇಶನ್ಸ್‌ನಲ್ಲಿ ಒಂದು ವರ್ಷದ ಇಂಜಿನಿಯರಿಂಗ್ ತರಬೇತಿ ಹಾಗೂ ಬೆಂಗಳೂರಿನಲ್ಲಿ ಎಂ.ಬಿ.ಎ ಪದವಿ ಪಡೆದರು.  ಬಾಲ್ಯದಿಂದಲೂ ಸಾಹಿತ್ಯಾಸಕ್ತಿ ಇದ್ದ ಕೊಡ್ಲೆಕೆರೆ ಅವರು ಮಾಸ ಪತ್ರಿಕೆಗಳಿಗೆ ಹನಿಗವನಗಳನ್ನು ಬರೆಯಲು ಆರಂಭಿಸಿದರು. ಕನ್ನಡಪ್ರಭ, ವಿಜಯಕರ್ನಾಟಕ ಸೇರಿದಂತೆ ಹಲವಾರು ಪತ್ರಿಕೆಗಳಲ್ಲಿ ಇವರು ಬರೆದ ಅಂಕಣ, ಕತೆ, ಕವನಗಳಿಗೆ ಬಹುಮಾನವನ್ನು ಪಡೆದಿದ್ದಾರೆ. 

ಇವರ ಪ್ರಮುಖ ಕೃತಿಗಳೆಂದರೆ ಈ ಜಗತ್ತು, ಭೂಮಧ್ಯರೇಖೆ, ಬಭ್ರುವಾಹನ ಮತ್ತು ಇರುವೆ, ಸಿಂಡ್ರೆಲಾ-ಅಂಬ್ರಲಾ, ಮೊದಲ ಮನೆಯ ಮೆಟ್ಟಿಲು ಮುಂತಾದವು. ಇವರಿಗೆ ಬಿ.ಎಚ್. ಶ್ರೀಧರ ಪ್ರಶಸ್ತಿ, ಎರಡು ಬಾರಿ ರತ್ನಾಕರವರ್ಣಿ ಮುದ್ದಣ ಅನಾಮಿಕ ಪ್ರಶಸ್ತಿ, ಆರ್.ಬಿ.ಐ.ನ ಬೆಳ್ಳಿ ಹಬ್ಬದ ಪ್ರಶಸ್ತಿ ಮುಂತಾದ ಪ್ರಶಸ್ತಿಗಳು ಒಲಿದು ಬಂದಿವೆ.

ಚಿಂತಾಮಣಿ ಕೊಡ್ಲೆಕೆರೆ

(13 Jan 1961)

BY THE AUTHOR