About the Author

ಜಾನಪದ ತಜ್ಞ,  ಸಾಹಿತಿ ಪ್ರೊ.ಡಿ. ಲಿಂಗಣ್ಣ ಅವರು ಜನಿಸಿದ್ದು 1939 ಡಿಸೆಂಬರ್‌ 16ರಂದು. ಶ್ರೀರಂಗಪಟ್ಟಣ ತಾಲ್ಲೂಕಿನ ಪೀ ಹಳ್ಳಿಯವರಾದ ಇವರು ಮಂಡ್ಯ ಹಾಗೂ ಮೈಸೂರಿನಲ್ಲಿ ಶಿಕ್ಷಣ ಪಡೆದರು. ಉಪನ್ಯಾಸಕರಾಗಿ ವೃತ್ತಿ ಆರಂಭಿಸಿದ ಇವರು ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿ ನಿವೃತ್ತರಾದರು. 

ಸಾಹಿತಿ, ಸಂಶೋಧಕರಾಗಿ ಕನ್ನಡ ಸಾಹಿತ್ಯದಲ್ಲಿ ಸೇವೆ ಸಲ್ಲಿಸಿರುವ ಇವರು ನಾಟಕ, ಕತೆ, ಕವನ, ಜೀವನ ಚರಿತ್ರೆ, ವ್ಯಕ್ತಿಚಿತ್ರಗಳು, ಪ್ರಬಂಧ ಹಾಗೂ ಗ್ರಂಥ ಸಂಪಾದನಾ ಕ್ಷೇತ್ರದಲ್ಲಿಯು ಸೇವೆ ಸಲ್ಲಿಸಿದ್ದಾರೆ. ಜಾನಪದ ಸಾಹಿತ್ಯದಲ್ಲಿ ಕೊಂತಿ ಪೂಜೆ, ಮಣ್ಣಿನ ಮಿಡಿತ, ಪಡಿನೆರಳು, ಬಯಲು ಸೀಮೆಯ ಜನಪದ ಗೀತೆಗಳು ಮುಂತಾದ ಕೃತಿಗಳನ್ನು ರಚಿಸಿದ್ದಾರೆ. 

ಇವರಿಗೆ ಕರ್ನಾಟಕ ರಾಜ್ಯ ಸಾಹಿತ್ಯ ಅಕಾಡೆಮಿ ಬಹುಮಾನ, ಚುಟುಕು ಭೂಷಣ ಪ್ರಶಸ್ತಿ, ಸಿಂಪಿಲಿಂಗಣ್ಣ ಪ್ರಶಸ್ತಿ, ಅತ್ತಿಮಬ್ಬೆ ಪ್ರತಿಷ್ಠಾನ ಪ್ರಶಸ್ತಿ, ಜಾನಪದ ರತ್ನ ಸೇರಿದಂತೆ ಹಲವಾರು ಪ್ರಶಸ್ತಿಗಳು ಸಂದಿವೆ. 

ಡಿ. ಲಿಂಗಯ್ಯ

(16 Dec 1939-13 Sep 2012)