About the Author

ಗಣಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದ ಡಿ.ಎಸ್.ನಾಗಭೂಷಣ ಅವರು 1952 ಫೆಬ್ರವರಿ 1 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಹೊಸಕೋಟೆ ತಾಲ್ಲೂಕಿನ ತಿಮ್ಮಸಂದ್ರದಲ್ಲಿ ಜನಿಸಿದರು. ದೆಹಲಿ ಆಕಾಶವಾಣಿಯಲ್ಲಿ ಕನ್ನಡ ವಾರ್ತಾ ವಾಚಕರಾಗಿ1975ರಿಂದ 1981ರವರೆ ಸೇವೆ ಸಲ್ಲಿಸಿದ್ದ ಅವರು ಆನಂತರದಲ್ಲಿ ಸಹಾಯಕ ನಿಲಯ ನಿರ್ದೇಶಕರಾಗಿ 7 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. 2005ರಲ್ಲಿ ವೃತ್ತಿಯಿಂದ ಸ್ವಯಂ ನಿವೃತ್ತಿ ಪಡೆದರು. ಓದು, ಬರವಣಿಗೆಯನ್ನು ಹವ್ಯಾಸವಾಗಿಸಿಕೊಂಡಿರುವ ಅವರು ‘ಇಂದಿಗೆ ಬೇಕಾದ ಗಾಂಧಿ’, ‘ಲೋಹಿಯಾ ಜೊತೆಯಲ್ಲಿ’, ‘ರೂಪ ರೂಪಗಳನು ಧಾಟಿ’, ‘ಕುವೆಂಪು ಒಂದು ಪುನರನ್ವೇಷಣೆ’, ‘ಕುವೆಂಪು ಸಾಹಿತ್ಯ ದರ್ಶನ’, ‘ಜಯ ಪ್ರಕಾಶ ನಾರಾಯಣ ಒಂದು ಅಪೂರ್ಣ ಕ್ರಾಂತಿಯ ಕಥೆ’, ‘ನಮ್ಮ ಶಾಮಣ್ಣ’, ‘ಕನ್ನಡದ ಮನಸು ಮತ್ತು ಇತರ ಲೇಖನಗಳು’. ಹಾಗೂ ‘ಕಾಲಕ್ರಮ’, ‘ಗಮನ’, ‘ಅನೇಕ’, ‘ಈ ಭೂಮಿಯಿಂದ ಆ ಆಕಾಶದವರೆಗೆ’, ‘ಮರಳಿ ಬರಲಿದೆ ಸಮಾಜವಾದ’, ‘ವಸಿಷ್ಠರು ಮತ್ತು ವಾಲ್ಮೀಕಿಯರು’, ‘ಹಣತೆ’(ಜಿಎಸ್ಸೆಸ್ ಅಭಿನಂದನೆ ಗ್ರಂಥ), ‘ಗಾಂಧಿ ಕಥನ’ ಸೇರಿದಂತೆ ಹಲವು ಮಹತ್ವದ ಕೃತಿಗಳನ್ನು ರಚಿಸಿದ್ದರು. 2022 ಮೇ 19 ರಂದು ಮರಣ.  

ಡಿ.ಎಸ್.ನಾಗಭೂಷಣ

(01 Feb 1952-19 May 2022)

Books by Author

Awards