About the Author

ಪದ್ಮಶ್ರೀ ಗೋವಿಂದ ಭೀಮಾಚಾರ್ಯ ಜೋಶಿ ಇವರು 1904 ಜುಲೈ 26 ರಂದು ಗದಗ ಜಿಲ್ಲೆಯ ಹೊಂಬಳದಲ್ಲಿ ಜನಿಸಿದರು. ಜಿ.ಬಿ.ಜೋಶಿಯವರು 1933 ರಲ್ಲಿ ಮನೋಹರ ಗ್ರಂಥಮಾಲೆಯನ್ನು ಬೆಟಗೇರಿ ಕೃಷ್ಣಶರ್ಮ ಹಾಗೂ ಚುಳಕಿ ಗೋವಿಂದರಾವ ಇವರ ಜೊತೆಗೂಡಿ ಪ್ರಾರಂಭಿಸಿದರು. ಈ ಪ್ರಕಾಶನ ಸಂಸ್ಥೆಯ ಮೂಲಕ ಅನೇಕ ಖ್ಯಾತ ಲೇಖಕರನ್ನುಕನ್ನಡ ಸಾಹಿತ್ಯಕ್ಕೆ ಪ್ರಥಮವಾಗಿ ಪರಿಚಯಿಸಿದರು.  1959 ರಲ್ಲಿ  ಹೊರಬಂದ ರಜತ ವರ್ಷದ ಕಾಣಿಕೆಯಾದ “ನಡೆದು ಬಂದ ದಾರಿ” ಮೂರು ಸಂಪುಟಗಳಲ್ಲಿ ಪ್ರಕಟವಾಯಿತು.

ಈ ಹೊತ್ತಿಗೆಯಲ್ಲಿ ಪ್ರಕಟವಾದ ಕೀರ್ತಿನಾಥ ಕುರ್ತಕೋಟಿಯವರ ಕನ್ನಡ ಸಾಹಿತ್ಯದ ಸಮಗ್ರ ವಿಮರ್ಶೆ, ವಿಮರ್ಶಾಲೋಕದಲ್ಲಿ ಹೊಸ ಆಯಾಮವನ್ನು ತೆರೆಯಿತು. ಆ ಬಳಿಕ ವಿಮರ್ಶೆಯ ನಿಯತಕಾಲಿಕೆ  ಮನ್ವಂತರ”ವನ್ನು ಪ್ರಾರಂಭಿಸಿದರು. ಜಿ.ಬಿ.ಜೋಶಿಯವರು "ಜಡಭರತ" ಹಾಗು "ಅನಾಮಧೇಯ" ಕಾವ್ಯನಾಮದಲ್ಲಿ ಸಾಹಿತ್ಯ ರಚಿಸಿದ್ದಾರೆ. ಮೂಕಬಲಿ, ಸತ್ತವರ ನೆರಳು, ಕದಡಿದ ನೀರು, ಆ ಊರು ಈ ಊರು, ನಾನೇ ಬಿಜ್ಜಳ, ಪರಿಮಳದವರು, ಜರ್ಮನ್ ಬಂಗ್ಲೆ ನಾಟಕಗಳನ್ನು ರಚಿಸಿದ್ದಾರೆ. ಸತ್ತವರ ನೆರಳು” ಹಾಗು 1977 ರಲ್ಲಿ “ನಾನೇ ಬಿಜ್ಜಳ” ಈ ನಾಟಕಗಳಿಗೆ ರಾಜ್ಯ ಸಾಹಿತ್ಯ ಅಕಾಡೆಮಿಯ ಬಹುಮಾನ ದೊರೆಯಿತು.1986 ರಲ್ಲಿ ಜಿ.ಬಿ.ಜೋಶಿಯವರಿಗೆ ಭಾರತ ಸರಕಾರ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

ಜಿ. ಬಿ. ಜೋಶಿ

(26 Jul 1904)