About the Author

ಜಿ.ಕೆ. ಗೋವಿಂದ ರಾವ್ 1937 ಏಪ್ರಿಲ್ 27ರಂದು ಬೆಂಗಳೂರಿನಲ್ಲಿ ಜನಿಸಿದರು. ಇಂಗ್ಲಿಷ್ ಸಾಹಿತ್ಯದ ಅಧ್ಯಯನ ನಡೆಸಿದ ಅವರು ಇಂಗ್ಲಿಷ್‌ ಪ್ರಾಧ್ಯಾಪಕರಾಗಿ ಕೆಲಸ ಮಾಡಿದರು. ರಂಗಭೂಮಿ, ಸಿನಿಮಾರಂಗದ ಒಡನಾಟ ಇವರಿಗಿದೆ. ಸಮಕಾಲೀನ ಪ್ರಜಾಸತ್ತಾತ್ಮಕ ಆಂದೋಲನಗಳಲ್ಲಿ ಭಾಗವಹಿಸಿ ತಮ್ಮ ಜನಪರ ನಿಲುವನ್ನು ಪ್ರಕಟಿಸುವುದು ಅವರಿಗೆ ಸದಾ ಆದ್ಯತೆಯ ವಿಷಯ. ಪ್ರಕಟಿತ ಕೃತಿಗಳು- ಈಶ್ವರ ಅಲ್ಲಾ (ಕಿರುಕಾದಂಬರಿ), ಶೇಕ್ಸ್‌ಪಿಯರ್ ಎರಡು ನಾಟಕಗಳ ಅಧ್ಯಯನ, ಶೇಕ್ಸ್‌ಪಿಯರ್ ಸಂವಾದ (ವಿಮರ್ಶಾ ಲೇಖನಗಳು), ನಡೆ-ನುಡಿ, ನಾಗರಿಕತೆ ಮತ್ತು ಅರಾಜಕತೆ, ಬಿಂಬ ಪ್ರತಿಬಿಂಬ, ಕ್ರಿಯೆ ಪ್ರತಿಕ್ರಿಯೆ, ಮನು ವರ್ಸಸ್ ಅಂಬೇಡ್ಕರ್: ತಮ್ಮ ಆಯ್ಕೆ ಯಾವುದು? (ಸಂಕೀರ್ಣ ಬರಹಗಳ ಸಂಗ್ರಹಗಳು).

ಜಿ.ಕೆ. ಗೋವಿಂದರಾವ್

(27 Apr 1937-15 Oct 2021)