About the Author

ಜಿ. ರಾಮಕೃಷ್ಣ ಸಂಸ್ಕೃತದಲ್ಲಿ ಮೈಸೂರು ವಿಶ್ವವಿದ್ಯಾನಿಲಯದಿಂದ ಎಂ.ಎ. ಮತ್ತು ಪಿಎಚ್.ಡಿ. ಪದವಿಗಳನ್ನೂ, ಪುಣೆ ಹಾಗೂ ವೇಲ್ ವಿಶ್ವವಿದ್ಯಾನಿಲಯಗಳಿಂದ ಇಂಗ್ಲಿಷ್‌ನಲ್ಲಿ ಎಂ.ಎ. ಪದವಿಗಳನ್ನೂ ಪಡೆದಿದ್ದಾರೆ. ಮಹಾಡಿನ ಡಾ.ಅಂಬೇಡ್ಕರ್ ಕಾಲೇಜು ಮತ್ತು ಬೆಂಗಳೂರಿನ ಬಸವನಗುಡಿ ನ್ಯಾಷನಲ್ ಕಾಲೇಜುಗಳಲ್ಲಿ ಇಂಗ್ಲಿಷ್ ಅಧ್ಯಾಪಕರಾಗಿ ಸುಮಾರು ಮೂವತ್ತು ವರ್ಷ ಕೆಲಸ ಮಾಡಿದ್ದಾರೆ, ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಸಂದರ್ಶಕ ಪ್ರಾಧ್ಯಾಪಕರಾಗಿದ್ದುಕೊಂಡು “ಭಾರತೀಯ ವಿಜ್ಞಾನದ ಹಾದಿ” ಎಂಬ ಮೌಲಿಕ ಕೃತಿಯನ್ನು ರಚಿಸಿದ್ದಾರೆ.

ಇವರ “ಮುನ್ನೋಟ' ಹಾಗೂ 'ಆಯತನ' ಗ್ರಂಥಗಳಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಬಹುಮಾನ ಲಭ್ಯವಾಗಿದೆ. ಮಾರ್ಕ್ಸ್‌ವಾದಿ ಅಧ್ಯಯನಗಳಲ್ಲಿ ವಿಶೇಷ ಆಸಕ್ತಿ ಹೊಂದಿದ್ದಾರೆ. ಭಗತ್‌ಸಿಂಗ್, ಚೆ ಗೆವಾರಾ, ವೈಚಾರಿಕ ಜಾಗೃತಿ, ಯೋಗಪ್ರವೇಶ, ದೇವಿಪ್ರಸಾದ್ ಮತ್ತು ಲೋಕಾಯತ ದರ್ಶನ, Phtosophy in China, ಮುಂತಾದ ಹಲವು ಗ್ರಂಥಗಳಲ್ಲಿ ಪ್ರಕಟಗೊಂಡಿವೆ. ಅನೇಕ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ವಿಚಾರಗೋಷ್ಠಿಗಳಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಪಾಂಡಿತ್ಯಪೂರ್ಣವಾದ ಪ್ರಬಂಧಗಳನ್ನು ಮಂಡಿಸಿದ್ದಾರೆ. ಇವರು Studies in Indian Culture, Eneyclopardia of South Indian Culture 3 Towards a Redefintion of the Education Policy, ಕಾಲೇಜು ಶಿಕ್ಷಕರಾಗಿ ಜಿ.ಆರ್. ಬೆಂಗಳೂರು ವಿಶ್ವವಿದ್ಯಾನಿಲಯದ ಸೆನೆಟ್ ಮತ್ತು ಅಕೆಡೆಮಿಕ್ ಕೌನ್ಸಿಲ್‌ಗಳಲ್ಲಿ ಹತ್ತು ವರ್ಷಗಳ ಕಾಲ ಶಿಕ್ಷಕರ ಚುನಾಯಿತ ಪ್ರತಿನಿಧಿಯಾಗಿ ಕಾರ್ಯನಿರ್ವಹಿಸಿದ್ದಾರೆ.

ಜಿ. ರಾಮಕೃಷ್ಣ

Books by Author

Awards