About the Author

ಊರು ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲ್ಲೂಕಿನ ಅಮೀನಗಡ, ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಕನ್ನಡ ಎಂ.ಎ., ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ 'ಕನ್ನಡ ಬಂಡಾಯ ಕಾವ್ಯದಲ್ಲಿ ಪ್ರತಿಮಾ ಸಂವಿಧಾನ ಕುರಿತು ಪಿಎಚ್.ಡಿ. ಮೂರು ವರ್ಷ ಸಂಯುಕ್ತ ಕರ್ನಾಟಕದಲ್ಲಿ ಪತ್ರಕರ್ತರಾಗಿ ಸೇವೆ, ಈಗ ಮೈಸೂರಲ್ಲಿ ಪ್ರಜಾವಾಣಿಯ ಮುಖ್ಯ ವರದಿಗಾರ.

ರಂಗಭೂಮಿ ಕುರಿತ ಲೇಖನಗಳ ಸಂಕಲನ 'ಪ್ರಯೋಗ ಪ್ರಸಂಗ' ಕೃತಿ (2004), ವಿಜಾಪುರದ ಯುವ ಲೇಖಕರ ವೇದಿಕೆಯ ಪ್ರಶಸ್ತಿ, ಸೇಡಂನ ಅಮ್ಮ ಪ್ರಶಸ್ತಿ ಹಾಗೂ ಕರ್ನಾಟಕ ನಾಟಕ ಅಕಾಡೆಮಿಯ ಪ್ರಶಸ್ತಿಗಳಿಂದ ಪುರಸ್ಕೃತಗೊಂಡಿದೆ. ಏಣಗಿ ಬಾಳಪ್ಪ ಅವರ ರಂಗಾನುಭವ ಕಥನ 'ಬಣ್ಣದ ಬದುಕಿನ ಚಿನ್ನದ ದಿನಗಳು' ಕೃತಿಯು (2007) ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿಯಿಂದ ಪುರಸ್ಕೃತಗೊಂಡಿದೆ. ಮೈಸೂರಿನ ಕೈದಿಗಳ ಕುರಿತ 'ಕೈದಿಗಳ ಕಥನ' (2008) ಕೃತಿ ಪ್ರಕಟ. 2010ರಲ್ಲಿ ಮೈಸೂರಿನ ರಂಗಾಯಣದಲ್ಲಿ ಪ್ರದರ್ಶನಗೊಂಡ ಕುವೆಂಪು ಅವರ 'ಮಲೆಗಳಲ್ಲಿ ಮದುಮಗಳು' ನಾಟಕ ಕುರಿತ 'ಮೈಸೂರು ಮದುಮಗಳು' ಕೃತಿ ಪ್ರಕಟ. ಮೂರು ನಾಟಕಗಳ ಸಂಕಲನ 'ಮುಳುಗಡೆ' 2016ರಲ್ಲಿ ಪ್ರಕಟ.

ರಂಗಾಯಣದ ನಿಕಟಪೂರ್ವ ರಂಗ ಸಮಾಜದ ಸದಸ್ಯ, ರಾಜ್ಯ ಗ್ರಂಥಾಲಯ ಇಲಾಖೆಯ ಉನ್ನತ ಮಟ್ಟದ ಪುಸ್ತಕ ಆಯ್ಕೆ ಸಮಿತಿಯ ಸದಸ್ಯ (2010-12). ಪ್ರಸ್ತುತ ಕರ್ನಾಟಕ ನಾಟಕ ಅಕಾಡೆಮಿ ಸದಸ್ಯರಾಗಿದ್ದಾರೆ.

ಗಣೇಶ ಅಮೀನಗಡ