About the Author

ಗಂಗಾಧರ ರೆಡ್ಡಿ ಅವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆಯವರು. ತಾಯಿ ಲಕ್ಷ್ಮಮ್ಮ ತಂದೆ ನಾರಾಯಣಸ್ವಾಮಿ. ಸಮಾಜಕಾರ್ಯ ವಿಷಯದಲ್ಲಿ ಸ್ನಾತಕೋತ್ತರ ಹಾಗೂ ಎಂ.ಫಿಲ್ ಪದವಿಗಳನ್ನು ಗಳಿಸಿದ ನಂತರ ಮಕ್ಕಳ ಹಕ್ಕುಗಳ ಸಂರಕ್ಷಣಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಅವರು ಕರ್ನಾಟಕದ ಹಲವು ಸಂಸ್ಥೆ ಮತ್ತು ಜಾಲ (ನೆಟ್‍ವರ್ಕ್) ಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ. ಪ್ರಸ್ತುತ ಬೆಂಗಳೂರು ವಿಶ್ವವಿದ್ಯಾಲಯ ಸಮಾಜಕಾರ್ಯ ವಿಭಾಗದಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ‘ಜೊತೆಗೆ ಉಸಿರಿಗಾಗಿ ಹಸಿರು’ ಎಂಬ ಸಂಘಟನೆಯನ್ನು ಹುಟ್ಟುಹಾಕಿ ಪರಿಸರ ಸಂರಕ್ಷಣೆ ಕಾಯಕದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಈ ಸಂಘಟನೆ ಜನ್ಮತಳೆದ ಮೊದಲ ವರ್ಷದಲ್ಲೇ ಯೂಥ್ ಫಾರ್ ಸೇವಾ ಸಂಸ್ಥೆ ನೀಡುವ ‘ಯುವಚೇತನ – ಅತ್ಯುತ್ತಮ ಸಂಘಟಿತ ತಂಡ' ಪುರಸ್ಕಾರವನ್ನು ಮುಡಿಗೇರಿಸಿಕೊಂಡಿದೆ.

ಮಕ್ಕಳ ಶಿಕ್ಷಣ ಹಕ್ಕು, ಬಾಲಕಾರ್ಮಿಕ ಪದ್ಧತಿ, ಬಾಲ್ಯವಿವಾಹ ಇತ್ಯಾದಿ ವಿಷಯಗಳಿಗೆ ಸಂಬಂಧಿಸಿದ ಲೇಖನಗಳು ಹಲವಾರು ವಾರ ಮತ್ತು ಮಾಸ ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಮಕ್ಕಳ ಶಿಕ್ಷಣ ಹಕ್ಕಿಗೆ ಸಂಬಂಧಿಸಿದ ಎರಡು ಮಾಹಿತಿ ಕೈಪಿಡಿ, ಸಮಾಜಕಾರ್ಯ ವಿಷಯಕ್ಕೆ ಸಂಬಂಧಿಸಿದಂತೆ ಕೃತಿ ರಚಿಸಿದ್ಧಾರೆ. ‘ವ್ಯಕ್ತಿಗತ ಸಮಾಜಕಾರ್ಯದ ಪರಿಚಯ’ ಅವರ ಮೊದಲ ಪುಸ್ತಕ. ಪ್ರಸ್ತುತ ಪರಿಸರ ಸಂರಕ್ಷಣೆ, ನೀರಾವರಿ ಹಾಗೂ ಕೃಷಿ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವ ಲೇಖಕರು ಉಸಿರಿಗಾಗಿ ಹಸಿರು ಸಂಘಟನೆಯ ಮೂಲಕ ಸದರಿ ಕ್ಷೇತ್ರಗಳಲ್ಲಿ ಸಂಶೋಧನಾ ನಿರತರಾಗಿದ್ದಾರೆ. 

ಗಂಗಾಧರ ರೆಡ್ಡಿ ಎನ್