About the Author

ಕನ್ನಡದ ಲೇಖಕಿಯರಲ್ಲಿ ಒಬ್ಬರಾದ ಗೀತಾ ನಾಗಭೂಷಣ ಅವರು ತಮ್ಮ ಕಾದಂಬರಿ-ಕತೆಗಳ ಮೂಲಕ ಜನಪ್ರಿಯರಾದವರು. ಗುಲ್ಬರ್ಗದ ಬಡ ಕುಟುಂಬದಲ್ಲಿ 1942ರ ಮಾರ್ಚ್ 25ರಂದು ಜನಿಸಿದರು. ತಂದೆ ಶಾಂತಪ್ಪ-ತಾಯಿ ಶರಣಮ್ಮ. ಮೆಟ್ರಿಕ್ ಮುಗಿಸಿದ ಮೇಲೆ ಕೆಲವುಕಾಲ ಕಲೆಕ್ಟರ್ ಕಛೇರಿಯಲ್ಲಿ ಉದ್ಯೋಗ ಮಾಡಿ ಬೆಳಗಿನ ಶಾಲೆಯಲ್ಲಿ ಓದಿ ಪದವಿ ಪಡೆದು, ಸಂಜೆ ಕಾಲೇಜಿನಲ್ಲಿ ಓದಿ ಬಿಎಡ್ ಮತ್ತು ಎಂ.ಎ. ಪದವಿ ಗಳಿಸಿದರು.

ಓದುವಾಗಲೇ ಉದ್ಯೋಗ ಮಾಡುತ್ತಿದ್ದ ಇವರು ಎಂ.ಎ. ಪದವಿ ಗಳಿಸಿದ ನಂತರ ಶ್ರೀ ನಗರೇಶ್ವರ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ, ಪ್ರಾಧ್ಯಾಪಕಿಯಾಗಿ, ಪ್ರಾಚಾರ್ಯೆಯಾಗಿ 30ವರ್ಷಗಳ ಸೇವೆ ಸಲ್ಲಿಸಿ ನಿವೃತ್ತರಾದರು.

‘ಬದುಕು’ ಕಾದಂಬರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದ ಇವರು ದಾನಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ (2002) ಕರ್ನಾಟಕ ರಾಜ್ಯ ಪ್ರಶಸ್ತಿ (1998), ನಾಡೋಜ ಪ್ರಶಸ್ತಿ (204), ಗುಲ್ಬರ್ಗ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್, ಪರಿಷತ್ತಿನಿಂದ ಮಲ್ಲಿಕಾ ಪ್ರಶಸ್ತಿ ಪಡೆದಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಹೆಗ್ಗಳಿಕೆ ಇವರದು.

ಇವರು ಅನೇಕ ಸಾಹಿತ್ಯ ಪ್ರಕಾರಗಳಲ್ಲಿ ಕೃತಿಗಳನ್ನು ರಚಿಸಿದ್ದಾರೆ.

ಹಸಿಮಾಂಸ ಮತ್ತು ಹದ್ದುಗಳು (ಕಾದಂಬರಿ), ಬದುಕು (ಕಾದಂಬರಿ), ಅವ್ವ ಮತ್ತು ಇತರ ಕಥೆಗಳು (ಕಥಾಸಂಗ್ರಹ), ಸಪ್ತವರ್ಣದ ಹಾಡು, ದುರಗಮುರಗಿಯವರ ಸಂಸ್ಕೃತಿ (ಸಂಶೋಧನೆ) ಜ್ವಲಂತ (ಕಥಾಸಂಗ್ರಹ) ಜೋಗಿಣಿ (ನಾಟಕ), ನನ್ನ ಚೆಲುವು ನಿನ್ನ ಒಲವು ಇತ್ಯಾದಿ. ಅವರು 2020 ಜೂನ್ 28ರಂದು ನಿಧನರಾದರು.

ಗೀತಾ ನಾಗಭೂಷಣ

(25 Mar 1942-28 Jun 2020)

BY THE AUTHOR

ABOUT THE AUTHOR