About the Author

ಗಿರೀಶ್ ಚಂದ್ರಕಾಂತ ಜಕಾಪುರೆ ಅವರು ಕಲಬುರ್ಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಮಾದನ ಹಿಪ್ಪರಗಿಯಲ್ಲಿ ಶಿಕ್ಷಕರಾಗಿದ್ದಾರೆ. ಹಿಂದಿ ಮತ್ತು ಕನ್ನಡ ಭಾಷೆಯಲ್ಲಿ ಸ್ನಾತಕೋತ್ತರ ಪದವೀಧರರು. ಕನ್ನಡ, ಹಿಂದಿ, ಮರಾಠಿ, ಇಂಗ್ಲಿಷ್, ಮತ್ತು ಉರ್ದು ಭಾಷೆಯನ್ನು ಬಲ್ಲವರು. ಕಾವ್ಯ, ಕಥಾ ಸಂಕಲನ, ವ್ಯಕ್ತಿಚಿತ್ರ, ಮಕ್ಕಳ ಕಥೆ, ಕಾದಂಬರಿ, ಮಕ್ಕಳ ಪದ್ಯ, ಹಿಂದಿ ಅನುವಾದಗಳು, ಮರಾಠಿ ಕಥೆಗಳ, ಕಾದಂಬರಿಗಳ ಅನುವಾದ, ಪ್ರವಾಸ ಕಥನಗಳು, ಬಿಡಿ ಲೇಖನಗಳು, ಅನುವಾದಿತ ಕಾವ್ಯ ಹೀಗೆ ತಮ್ಮ ಸಾಹಿತ್ಯ ಕೃಷಿಯನ್ನು ನಿರಂತರವಾಗಿ ಮಾಡುತ್ತಿದ್ದಾರೆ.

ಪ್ರಮುಖ ಕೃತಿಗಳು: ನನ್ನ ದನಿಗೆ ನಿನ್ನ‌ ದನಿಯು, ಮನದ ಮುಂದಣ ಮಾಯೆ (ಗಜಲ್ ಗಳ ಸಂಕಲನ), ಖಾಮೋಶಿ, ಸಾಗರ್ ಔರ್ ಬಾರಿಶ್ (ಹಿಂದಿಗೆ ಅನುವಾದಿತ ಕೃತಿಗಳು). ಗೀತಾಂಜಲಿ (ಕನ್ನಡಾನುವಾದ)

ಇವರ  ಸಾಹಿತ್ಯ ಸೇವೆಗೆ ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕ ಸೊಗಸು ಬಹುಮಾನ, ಜಯದೇವಿತಾಯಿ ಲಿಗಾಡೆ ಕಾವ್ಯ ಪ್ರಶಸ್ತಿ, ಅತ್ತಿಮಬ್ಬೆ ಕಾವ್ಯ ಪ್ರಶಸ್ತಿ, ಕಲ್ಯಾಣ ಕರ್ನಾಟಕ ಸಾಧಕ ಶಿಕ್ಷಕ ಪ್ರಶಸ್ತಿ, ಡಿ.ಎಸ್. ಕರ್ಕಿ ಕಾವ್ಯ ಪ್ರಶಸ್ತಿ, ಮಾಸ್ತಿ ಕಾದಂಬರಿ ಪ್ರಶಸ್ತಿ ಇನ್ನೂ ಅನೇಕ ಪ್ರಶಸ್ತಿ, ಪುರಸ್ಕಾರಗಳಿಗೆ ಭಾಜನರಾಗಿದ್ದು, ಮಹಾರಾಷ್ಟ್ರದಲ್ಲಿ ಆದರ್ಶ ಕನ್ನಡ ಬಳಗದ ಕಾರ್ಯದರ್ಶಿಯಾಗಿದ್ದಾರೆ. ಆದರ್ಶ ಅನುವಾದ ಅಕಾಡೆಮಿಯಲ್ಲಿ ಅನುವಾದ ಕಾರ್ಯ ಮುಂದುವರೆಸಿದ್ದಾರೆ. ಡಾ. ಫ.ಗು. ಹಳಕಟ್ಟಿ ವಾಚನಾಲಯ ಸ್ಥಾಪನೆಯಲ್ಲಿ ಅನೇಕ ಕನ್ನಡ ಓದುಗರಿಗೆ ಪುಸ್ತಕ ಪ್ರೀತಿ ಹಂಚಿದ್ದಾರೆ. ಕಿರುಚಿತ್ರ ನಿರ್ಮಾಣ, ವ್ಯಕ್ತಿಚಿತ್ರಗಳ ಕುರಿತ ದೃಶ್ಯ ಮಾಧ್ಯಮ ಕ್ಷೇತ್ರದಲ್ಲೂ ತೊಡಗಿಸಿಕೊಂಡಿದ್ದಾರೆ. 

ಗಿರೀಶ ಜಕಾಪುರೆ

(09 Sep 1981)

Awards

BY THE AUTHOR