About the Author

ಲೇಖಕ ಗುರುರಾಜ ಪೋಶೆಟ್ಟಿಹಳ್ಳಿ ಸಾತ್ವಿಕ ಸಾಹಿತ್ಯ ವಕ್ತಾರರೆಂದೇ ಗುರುತಿಸಿಕೊಂಡಿದ್ದಾರೆ. 1980ರಲ್ಲಿ ಜನಿಸಿದ ಅವರು ಪತ್ರಿಕೋದ್ಯಮ ಪದವಿ ಹಾಗೂ ಕನ್ನಡ ಎಂ.ಎ ಪೂರ್ಣಗೊಳಿಸಿದ್ದಾರೆ. ನೀತಿ ಆಯೋಗದಿಂದ ಮಾನ್ಯತೆ ಪಡೆದ ಐವಿಎಪಿಯಿಂದ ಇಂಡಾಲಜಿ-ಗಣಪತಿ ಕುರಿತು ವಿಶೇಷ ಅಧ್ಯಯನಕ್ಕೆ ರಾಜಮಾತಾ ಶ್ರೀಮತಿ ಪ್ರಮೋದಾದೇವಿ ಒಡೆಯರ್ ರಿಂದ ಗೌರವ ಡಾಕ್ಟರೇಟ್ ಪದವಿ ಪಡೆದಿದ್ದಾರೆ. ಸಂಸ್ಕೃತಿ ಚಿಂತಕರು, ಅಂಕಣಕಾರರೂ ಆಗಿರುವ ಗುರುರಾಜ ಪೋಶೆಟ್ಟಿಹಳ್ಳಿ ಅವರು ಮಾಧ್ಯಮ ಸಮಾಲೋಚಕ ಹಾಗೂ ಸಂಘಟಕರಾಗಿಯೂ ಗುರುತಿಸಿಕೊಂಡಿದ್ದು, ಪ್ರಣವ ಮೀಡಿಯಾ ಹೌಸ್ ರೂವಾರಿಗಳಾಗಿದ್ದಾರೆ.  

ಪ್ರಕಟಿತ ಕೃತಿಗಳು: ಕನ್ನಡದ ಕಂಪಿನಲಿ ಕರಿವದನ, ಭಕ್ತಿ ಪಾರಿಜಾತ, ವಂದೇ ಗುರುಪರಂಪರಾಮ್’, ಅಡ್ವೈಸರ್ ಯೋಗ ವಿಶೇಷಾಂಕ 2018(ಅತಿಥಿ ಸಂಪಾದಕ), ಡಾ.ಅರಳುಮಲ್ಲಿಗೆ ಪಾರ್ಥಸಾರಥಿ 70ರ ಅಭಿನಂದನಾ ಗ್ರಂಥ(950 ಪುಟಗಳು) ಪ್ರಧಾನ ಸಂಪಾದಕರಾಗಿದ್ದಾರೆ. 

ಸಾಹಿತ್ಯ ಹಾಗೂ ಸಂಘಟನಾತ್ಮಕ ಸೇವೆಗಳಿಗಾಗಿ ಉಡುಪಿ ಪಲಿಮಾರು ಪರ್ಯಾಯದಲ್ಲಿ ಶ್ರೀಕೃಷ್ಣ ಸೇವಾಮಾನ್ಯ ಪ್ರಶಸ್ತಿ, ಸರ್.ಎಂ.ವಿ. ರಾಜ್ಯ ಪ್ರಶಸ್ತಿ, ಆಚಾರ್ಯ ವಿದ್ಯಾರಣ್ಯ ಪ್ರಶಸ್ತಿ, ನಾಡಭೂಷಣ, ಧನ್ವಂತರಿ ಪುರಸ್ಕಾರ, ಸುವರ್ಣ ಗಜಾನನ ಪ್ರಶಸ್ತಿ, ಹರಿದಾಸ ಅನುಗ್ರಹ ಪ್ರಶಸ್ತಿ, ಮಹಾತ್ಮ ಗಾಂಧಿ ಸದ್ಭಾವನಾ ಪ್ರಶಸ್ತಿ ಸೇರಿದಂತೆ ಹಲವು ಗೌರವ ಪ್ರಶಸ್ತಿಗಳು ಲಭಿಸಿವೆ. 

ಗುರುರಾಜ ಪೋಶೆಟ್ಟಿಹಳ್ಳಿ