About the Author

ಪತ್ರಿಕೆ ಹಾಗೂ ಜರ್ನಲ್‍ಗಳಲ್ಲಿ ಲೇಖನಗಳನ್ನು ಪ್ರಕಟಿಸಿರುವ ಡಾ. ಹಂಪೇಶ್ ಕೆ ಎಸ್ ಪ್ರಸ್ತುತ ಸಹಾಯಕ ಪ್ರಾಧ್ಯಾಪಕರಾಗಿ ಎಸ್.ಡಿ.ಎಂ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಹತ್ತು ವರ್ಷಗಳ ಬೋಧನಾ ಅನುಭವ ಹೊಂದಿರುವ ಇವರು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ವಿಚಾರ ಸಂಕಿರಣಗಳಲ್ಲಿ ಪ್ರಬಂಧ ಮಂಡಿಸಿದ್ದಾರೆ. 
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಕಲ್ಲಹಳ್ಳಿ ಇವರ ಹುಟ್ಟೂರು. ಪದವಿವರೆಗಿನ ವ್ಯಾಸಂಗವನ್ನು ಭದ್ರಾವತಿಯಲ್ಲಿ ಮುಗಿಸಿ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಸ್ನಾತಕೋತ್ತರ ಪತ್ರಿಕೋದ್ಯಮ ಪದವಿ ನಂತರ ಪಿಹೆಚ್‍ಡಿ ಪಡೆದರು. ಕುವೆಂಪು ವಿಶ್ವವಿದ್ಯಾನಿಲಯ ಹಾಗೂ ಗುಲ್ಬರ್ಗ ವಿಶ್ವವಿದ್ಯಾನಿಲಯಗಳಲ್ಲಿ ಅತಿಥಿ ಉಪನ್ಯಾಸಕರಾಗಿದ್ದಾರೆ. ಪತ್ರಿಕೋದ್ಯಮದ ವಿವಿಧ ಮಜಲುಗಳು, ಸಂಪಾದನೆ ಹಾಗೂ "ದಿ ರೋಲ್ ಆಫ್ ಕಮ್ಯುನಿಕೇಶನ್ಸ್ ಇನ್ ರೂರಲ್ ಡೆವೆಲಪ್ಮೆಂಟ್" ಎಂಬ ಮೂರು ಪುಸ್ತಕಗಳನ್ನು ಪ್ರಕಟಿಸಿದ್ದಾರೆ.

ಹಂಪೇಶ್ ಕೆ.ಎಸ್.