About the Author

ಅಂತಾರಾಷ್ಟ್ರೀಯ ಖ್ಯಾತಿಯ ಸಮಾಜ ವಿಜ್ಞಾನಿ ಡಾ. ಹಿರೇಮಲ್ಲೂರು ಈಶ್ವರನ್, ಮೂಲತಃ ಧಾರವಾಡ ಜಿಲ್ಲೆಯ ಶಿಗ್ಗಾವಿ ತಾಲ್ಲೂಕಿನ ಹಿರೇಮಲ್ಲೂರು ಗ್ರಾಮದವರು. ಲಿಂಗರಾಜ ಮಹಾವಿದ್ಯಾಲಯದಿಂದ ಎಂ.ಎ.  ಪಡೆದ ನಂತರ ಕೆಲಕಾಲ ಸೊಲ್ಲಾಪುರದಲ್ಲಿ ಕನ್ನಡ ಅಧ್ಯಾಪಕ ರಾಗಿದ್ದರು. 'ಹರಿಹರ ಕವಿಯ ಕೃತಿಗಳು - ಒಂದು ಸಂಖ್ಯಾನಿರ್ಣಯ' ವಿಷಯದಲ್ಲಿ ಡಾಕ್ಟರೇಟ್ ಪಡೆದರು. ಉನ್ನತ ಅಧ್ಯಯನಕ್ಕಾಗಿ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯಕ್ಕೆ ತೆರಳಿ ಸಮಾಜವಿಜ್ಞಾನ ಕ್ಷೇತ್ರದಲ್ಲಿ ಡಿ.ಲಿಟ್. ಪದವಿ ಪಡೆದರು. ಕೆನಡಾದ ಯಾರ್ಕ್ ವಿಶ್ವವಿದ್ಯಾಲಯದಲ್ಲಿ ಸಮಾಜವಿಜ್ಞಾನ ಪ್ರಾಧ್ಯಾಪಕರಾಗಿದ್ದರು. ನಂತರ ಹಾಲೆಂಡ್‌ ನಲ್ಲಿ ನೆಲೆಸಿದರು. ಮನುಸ್ಕೃತಿ ಮತ್ತು ಪಾಶ್ಚಾತ್ಯ ಕುಟುಂಬ ಜೀವನ ಕುರಿತು ಸಂಶೋಧನೆ ನಡೆಸಿ ಇಂಗ್ಲಿಷ್ ನಲ್ಲಿ ಗ್ರಂಥ ಪ್ರಕಟಿಸಿದ್ದಾರೆ. ಅವರು ರಚಿಸಿದ 8 ಗ್ರಂಥಗಳ ಜೊತೆಗೆ 50ಕ್ಕೂ ಹೆಚ್ಚು ಗ್ರಂಥಗಳ ಸಂಪಾದಕರಾಗಿದ್ದರು. ಎರಡು ದಶಕಗಳ ಕಾಲ ಮೂರು ಅಂತಾರಾಷ್ಟ್ರೀಯ ತೈಮಾಸಿಕಗಳನ್ನು ಪ್ರಕಟಿಸುತ್ತಿದ್ದರು. 1998ರ ಜೂನ್ 23 ರಂದು ಹಾಲೆಂಡ್ ನಲ್ಲೇ ನಿಧನರಾದರು.

ಹಿರೇಮಲ್ಲೂರು ಈಶ್ವರನ್

(01 Jan 1922-23 Jun 1998)