About the Author

ಖ್ಯಾತ ವಿಜ್ಞಾನಿ ಪ್ರೊ.ಸಿ.ಎನ್‌.ಆರ್‌ ರಾವ್‌ ಅವರದು ‘ವಿಜ್ಞಾನ ಕುಟುಂಬ’. ಅವರ ಪತ್ನಿ ಇಂದುಮತಿ ರಾವ್‌ ಈ ಹಿಂದೆ ಬೆಂಗಳೂರಿನ ಎಂ.ಇ.ಎಸ್‌ ಕಾಲೇಜಿನಲ್ಲಿ ಶಿಕ್ಷಕಿಯಾಗಿದ್ದರು. ಪ್ರಸ್ತುತ ಅವರು ಜವಾಹರ್‌ಲಾಲ್‌ ನೆಹರೂ ಉನ್ನತ ವೈಜ್ಞಾನಿಕ ಸಂಶೋಧನಾ ಕೇಂದ್ರದಲ್ಲಿ ಮಕ್ಕಳಿಗೆ ವಿಜ್ಞಾನ ಆಸಕ್ತಿ ಮೂಡಿಸುತ್ತಿದ್ದಾರೆ. ಪುತ್ರ, ಸಂಜಯ್‌ ರಾವ್‌ ಕೂಡ ಜವಾಹರ್‌ಲಾಲ್‌ ನೆಹರೂ ಉನ್ನತ ವೈಜ್ಞಾನಿಕ ಸಂಶೋಧನಾ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರೆ ಪುತ್ರಿ, ಸುಚಿತ್ರಾ ರಾವ್‌ ಅವರ ಪತಿ, ಕೆ.ಎನ್‌. ಗಣೇಶ್‌ ಪುಣೆಯ ವಿಜ್ಞಾನ ಶಿಕ್ಷಣ ಹಾಗೂ ಸಂಶೋಧನಾ ಕೇಂದ್ರದ ನಿರ್ದೇಶಕರು.

ಇಂದುಮತಿ ರಾವ್