About the Author

ಹಳಗನ್ನಡ ಸಾಹಿತ್ಯ, ಸಂಸ್ಕೃತಿ, ಶಾಸನಗಳ ಅಧ್ಯಯನ, ಛಂದಸ್ಸು, ಗ್ರಂಥ ಸಂಪಾದನೆ, ಹಸ್ತಪ್ರತಿ ಶಾಸ್ತ್ರದಲ್ಲಿ ವಿಶೇಷ  ಕೃಷಿ ಕೈಗೊಂಡಿರುವ ಜೆ.ಎಂ. ನಾಗಯ್ಯ ಅವರು ಕನ್ನಡದ ಪ್ರತಿಭಾವಂತ ಲೇಖಕರಲ್ಲಿ ಒಬ್ಬರು. ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಹಂಪಾಪಟ್ಟಣ ನಾಗಯ್ಯ ಅವರ ಹುಟ್ಟೂರು. ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಕನ್ನಡ, ಗ್ರಂಥಾಲಯ ವಿಜ್ಞಾನದಲ್ಲಿ ಪದವಿ- ಸ್ನಾತಕೋತ್ತರ ಪದವಿ ಪಡೆದಿದ್ದು, ಶಾಸನಶಾಸ್ತ್ರ-ಅನುವಾದದಲ್ಲಿ ಡಿಪ್ಲೋಮಾ, ಡಾ.ಎಂ. ಎಂ. ಕಲಬುರ್ಗಿ ಮಾರ್ಗದರ್ಶನದಲ್ಲಿ ಪಿಎಚ್ ಡಿ ಪೂರ್ಣಗೊಳಿಸಿದ್ದಾರೆ.

ಕರ್ನಾಟಕ ವಿವಿಯ ಕನ್ನಡ ಅಧ್ಯಯನ ಪೀಠದ ಅಧ್ಯಕ್ಷರು, ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಬಳ್ಳಾರಿ ಜಿಲ್ಲೆಯ ಶಾಸನಗಳು, 6ನೇ ವಿಕ್ರಾಮಾದಿತ್ಯನ ಶಾಸನಗಳು ಒಂದು ಅಧ್ಯಯನ, ಕಲಕೇರಿ ಶಿಲ್ಪಗಳಲ್ಲಿ ಶಿವಶರಣರು, ಸಂದರ್ಭ ಸಾಹಿತ್ಯ, ಗುಂಡ ಬ್ರಹ್ಮಯ್ಯ ಸೇರಿ ಒಟ್ಟು 17ಕೃತಿಗಳನ್ನು ರಚಿಸಿದ್ದಾರೆ. ಪತ್ರಿಕೆಗಳಲ್ಲಿ 60ಕ್ಕೂ ಅಧಿಕ ಸಂಶೋಧನಾ ಲೇಖನಗಳನ್ನು ಪ್ರಕಟಿಸಿದ್ದಾರೆ.  ಗುಲಬರ್ಗಾ ವಿವಿಯ ರಾಜ್ಯೋತ್ಸವ ಪ್ರಶಸ್ತಿ. ಪ್ರೊ. ಸ.ಸ.ಮಾಳವಾಡ ಪ್ರಶಸ್ತಿಗೆ ಭಾಜನರಾಗಿದ್ದಾರೆ.. 

ಜೆ.ಎಂ.ನಾಗಯ್ಯ