About the Author

ಡಾ. ಜಯಶಂಕರ ಹಲಗೂರು ಅವರು ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಹಲಗೂರಿನವರು. 'ಆಧುನಿಕ ಕನ್ನಡ ಕಥನ ಸಾಹಿತ್ಯದಲ್ಲಿ ಕೋಮುವಾದದ ಪ್ರತಿನಿಧೀಕರಣ' ಎಂಬ ವಿಷಯದಲ್ಲಿ ಸಂಶೋಧನೆ ನಡೆಸಿ ಹಂಪಿಯ ಕನ್ನಡ ವಿಶ್ವವಿದ್ಯಾಲಯದಿಂದ ಪಿಎಚ್.ಡಿ. ಪಡೆದಿದ್ದಾರೆ. ಕನಕಪುರ ತಾಲ್ಲೂಕಿನ ಹಾರೋಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ಸಹಾಯಕ ಪ್ರಾಧ್ಯಾಪಕರಾಗಿರುವ ಇವರು ಹೊಸ ತಲೆಮಾರಿನ ಕವಿ ಮತ್ತು ಸಾಹಿತ್ಯ ವಿಮರ್ಶಕ.

ಜಯಶಂಕರ ಹಲಗೂರು