About the Author

ಜೋಗಿ, ಜಾನಕಿ, ಎಚ್‌. ಗಿರೀಶ್‌ ರಾವ್, ಸತ್ಯವ್ರತ...... ಹೀಗೆ ವಿವಿಧ ಅಂಕಿತನಾಮಗಳ ಮೂಲಕವೇ ಓದುಗರನ್ನು ತಲುಪಿದವರು ಗಿರೀಶ್‌ ರಾವ್‌ ಹತ್ವಾರ್‌ (ಜೋಗಿ). ವೃತ್ತಿಯಲ್ಲಿ ಪತ್ರಕರ್ತರಾಗಿರುವ ಜೋಗಿ ಅವರು ಹುಟ್ಟಿದ್ದು 1965 ನವೆಂಬರ್‌ 16ರಂದು. ಮೂಲತಃ ಸೂರತ್ಕಲ್‌ ಸಮೀಪದ ಹೊಸಬೆಟ್ಟು ಊರಿನವರಾದ ಇವರು ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. 

ಹಾಯ್‌ ಬೆಂಗಳೂರು ವಾರಪತ್ರಿಕೆಯಲ್ಲಿ ‘ರವಿ ಕಾಣದ್ದು’, ‘ಜಾನಕಿ ಕಾಲಂ’ ಅಂಕಣ ಬರಹಗಳ ಮೂಲಕ ಓದುಗರಿಗೆ ಪರಿಚಯವಾದ ಜೋಗಿ ಅವರು ಪ್ರಸ್ತುತ ಕನ್ನಡ ಪ್ರಭ ದಿನಪತ್ರಿಕೆಯಲ್ಲಿ ಪುರವಣಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ವೃತ್ತಿ ಜೊತೆ ಜೊತೆಗೆ ಸಾಹಿತ್ಯ ಕೃಷಿಯಲ್ಲಿ ತೊಡಗಿಸಿಕೊಂಡಿರುವ ಇವರು ಹಲವಾರು ಕೃತಿಗಳನ್ನು ರಚಿಸಿದ್ದಾರೆ. 

ನದಿಯ ನೆನಪಿನ ಹಂಗು, ಯಾಮಿನಿ, ಚಿಟ್ಟೆ ಹೆಜ್ಜೆ ಜಾಡು, ಹಿಟ್ ವಿಕೆಟ್, ಊರ್ಮಿಳಾ, ಮಾಯಾಕಿನ್ನರಿ, ಗುರುವಾಯನಕೆರೆ, ದೇವರ ಹುಚ್ಚು, ಚಿಕ್ಕಪ್ಪ, ಚೈತ್ರ ವೈಶಾಖ ವಸಂತ, ಎಲ್ಲಾನು ಮಾಡುವುದು ಹೊಟ್ಟೆಗಾಗಿ, ವಿರಹದ ಸಂಕ್ಷಿಪ್ತ ಪದಕೋಶ, ಬೆಂಗಳೂರು, ಬಿ ಕ್ಯಾಪಿಟಲ್, ಸೀಳುನಾಲಿಗೆ, ಜೋಗಿ ಕತೆಗಳು, ಕಾಡು ಹಾದಿಯ ಕತೆಗಳು, ರಾಯಭಾಗದ ರಹಸ್ಯ ರಾತ್ರಿ, ಜರಾಸಂಧ, ಸೂಫಿ ಕತೆಗಳು, ಕಥಾ ಸಮಯ, ಫೇಸ್ ಬುಕ್ ಡಾಟ್ ಕಾಮ್-ಮಾನಸಜೋಶಿ, ನಾಳೆ ಬಾ, ಅಶ್ವಥ್ಥಾಮನ್‌, ಎಲ್‌ (ಕಾದಂಬರಿ),  ಆಸ್ಕ್‌ ಮಿಸ್ಟರ್‌, ಜೋಗಿ ಕಾಲಂ, ನೋಟ್‌ ಬುಕ್‌, ಮುಂತಾದ ಕೃತಿಗಳನ್ನು ರಚಿಸಿದ್ದಾರೆ. ಇವರಿಗೆ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳು ಸಂದಿವೆ. 

ಜೋಗಿ (ಗಿರೀಶ್ ರಾವ್ ಹತ್ವಾರ್)

(16 Nov 1965)

Books by Author

BY THE AUTHOR