About the Author

ಸಂಶೋಧಕಿ, ಸ್ತ್ರೀ ಚಿಂತನೆಯ ಕನ್ನಡದ ಬರಹಗಾರ್ತಿ ಜ್ಯೋತ್ಸ್ನಾ ಕಾಮತ್ ಅವರು 1937 ಜನವರಿ 24 ರಂದು ಮಹಾರಾಷ್ಟ್ರದ ಸಾತಾರ ಜಿಲ್ಲೆಯ ವಾಯಿಯಲ್ಲಿ ಜನಿಸಿದರು. ‘ಸಂಸಾರದಲ್ಲಿ ಸ್ವಾರಸ್ಯ, ಹೀಗಿದ್ದೇವೆ ನಾವು, ನಗೆಕೇದಿಗೆ’ ಅವರ ಪ್ರಬಂಧ ಸಂಕಲನಗಳು. ‘ಕರ್ನಾಟಕದಲ್ಲಿ ಶಿಕ್ಷಣ ಪರಂಪರೆ, ಕರುನಾಡಿನ ಜನಜೀವನ, ಕೈಗನ್ನಡಿಯಲ್ಲಿ ಕನ್ನಡತಿ’ ಅವರ ಸಂಶೋಧನಾ ಕೃತಿಗಳು. ‘ಮಹಿಳೆ ಒಂದು ಅಧ್ಯಯನ, ನೆನಪಿನಲ್ಲಿ ನಿಂತವರು, ಮಹಿಳೆ ಅಂದು-ಇಂದು’ ಅವರ ಮಹಿಳಾ ಅಧ್ಯಯನ ಕೃತಿಗಳು. ಇದಲ್ಲದೆ ಶಾಂತಲೆ-ವಿಷ್ಣುವರ್ಧನ, ಕಮಲಾದೇವಿ ಚಟ್ಟೋಪಾಧ್ಯಾಯರ ಜೀವನ ಕೃತಿಗಳನ್ನು ರಚಿಸಿದ್ದು ಅವರ ಈ ಸಾಹಿತ್ಯ ಸೇವೆಗೆ ‘ಕರ್ನಾಟಕ ಸಾಹಿತ್ಯ ಅಕಾಡೆಮಿ ಬಹುಮಾನ, ಕರ್ನಾಟಕ ಸರ್ಕಾರದ ರಾಜ್ಯೋತ್ಸವ ಪ್ರಶಸ್ತಿ, ಕೆ.ಶಾಮರಾವ್ ದತ್ತಿನಿಧಿ ಪುರಸ್ಕಾರ, ಅ.ಸು. ಕೃಷ್ಣರಾವ್ ಸ್ಮಾರಕ ಬಹುಮಾನ, ಶಾಶ್ವತಿ ಪ್ರತಿಷ್ಠಾನದ ಸದೋದಿತಾ ಪ್ರಶಸ್ತಿ, ಮೈಕೋ ಕನ್ನಡ ಸಂಘದ ಕಿಟೆಲ್ ಪ್ರಶಸ್ತಿ, ಟಿ.ಎಂ.ಎ.ಪೈ, ಫೌಂಡೇಶನ್ ಪ್ರಶಸ್ತಿ’ಗಳು ಲಭಿಸಿವೆ. 

ಅಗಸ್ಟ್ 24, 2022ರಂದು ಅವರು ನಿಧನರಾಗಿದ್ದಾರೆ. 

ಜ್ಯೋತ್ಸ್ನಾ ಕಾಮತ್

(24 Jan 1937-24 Aug 2022)

BY THE AUTHOR