About the Author

ಕೆ.ಪುಟ್ಟಸ್ವಾಮಿ- ಹುಟ್ಟಿದ್ದು ಕನಕಪುರ ತಾಲೂಕಿನ ವರಗೆರಹಳ್ಳಿಯಲ್ಲಿ. ಕನಕಪುರ ಕೆ.ಜಿ.ಎಫ್ ಮುಂತಾದೆಡೆಗಳಲ್ಲಿ ಪ್ರಾಥಮಿಕ ಶಿಕ್ಷಣ. ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಿಂದ ಕೃಷಿ ಪದವಿ. ಮೈಸೂರು ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಡಿಪ್ಲಮಾ ಹಾಗೂ ಹಂಪಿಯ ಕನ್ನಡ ವಿಶ್ವವಿದ್ಯಾಲಯದಿಂದ ಡಿಲಿಟ್ ಪದವಿ. 

ಪತ್ರಕರ್ತರಾಗಿ, ಕರ್ನಾಟಕ ಸರಕಾರದ ವಾರ್ತಾ ಇಲಾಖೆ, ಅರಣ್ಯ, ಜೀವ ಪರಿಸರ, ಹಿಂದುಳಿದ ವರ್ಗಗಳ ಇಲಾಖೆ, ಯುವಜನ ಮತ್ತು ಕ್ರೀಡಾ ಇಲಾಖೆ, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು ಮಹಾನಗರ ಪಾಲಿಕೆ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಮುಂತಾದೆಡೆ ಹಲವು ಹುದ್ದೆಗಳಲ್ಲಿ ಕೆಲಸ ನಿರ್ವಹಿಸಿ ನಿವೃತ್ತರಾಗಿದ್ದಾರೆ. ಜೀವ ಸಂಕುಲಗಳ ಉಗಮ, ಜೀವಜಾಲ, ಸಿನಿಮಾಯಾನ ಮುಂತಾದವು ಮುಖ್ಯ ಕೃತಿಗಳು. ಮಣಿ ಭೂಮಿಕ್, ಸಹಸ್ರಬುದ್ಧೆ, ಭೀರೇಂದ್ರ ಭಟ್ಟಾಚಾರ್ಯ, ಎಚ್.ಜಿ.ವೇಲ್ಸ್, ಜೂಲ್ಸ್ ವರ್ನ್ ಮತ್ತು ಲ್ಯ್ ವ್ಯಾಲೆಸ್ ಮುಂತಾದವರ ಕೃತಿಗಳನ್ನು ಅನುವಾದಿಸಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ರಾಜ್ಯ ಪರಿಸರ ಪ್ರಶಸ್ತಿ, ರಾಷ್ಟ್ರಪತಿಗಳು ಕೊಡಮಾಡುವ ಸ್ವರ್ಣ ಕಮಲ ಮುಂತಾದ ಪ್ರಶಸ್ತಿಗಳು ಸಂದಿವೆ. 

ಕೆ. ಪುಟ್ಟಸ್ವಾಮಿ

Awards