About the Author

ಕೆ. ಎಸ್. ಶ್ರೀನಿವಾಸ ಮೂರ್ತಿ ಆಂಗ್ಲ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಬೆಂಗಳೂರಿನಲ್ಲಿ ಬ್ಯಾಂಕ್ ಉದ್ಯೋಗಿಯಾಗಿದ್ದಾರೆ. ಅವರ ಕೆಲವು ಕವನಗಳು 'ಶೂದ್ರ', 'ಸಂಕ್ರಮಣ' ಮುಂತಾದ ಸಾಹಿತ್ಯಕ ಪತ್ರಿಕೆಗಳಲ್ಲಿ ಮತ್ತು “ಕ್ರಿಸ್ತಾಂಜಲಿ', 'ಅಂಕಣ ಕಾವ್ಯಾಂಕ', 'ಯುವಭಾರತಿ' 1973 ಮತ್ತು 1975, ಬೆಂಗಳೂರು ವಿಶ್ವವಿದ್ಯಾಲಯ) ಮುಂತಾದ ಕವನ ಸಂಗ್ರಹಗಳಲ್ಲಿ ಪ್ರಕಟವಾಗಿವೆ.

ಕನ್ನಡದ ಕಲಾಸಾಹಿತ್ಯದ ದೃಷ್ಟಿಯಿಂದ ಅವರ ಕೆಲವು ಲೇಖನಗಳು ವಿಶೇಷವಾದ ಭರವಸೆಯನ್ನು ಹುಟ್ಟಿಸಿವೆ. ಶಾಬ್ಲಿಕ ಮಾಧ್ಯಮದಲ್ಲಿ ದೃಶ್ಯ ಮಾಧ್ಯಮ' (ಅಂಕಣ') 'ಪುಷ್ಪಮಾಲ ಅವರ ಕಲೆ' (ಶೂದ್ರ), (ರುಮಾಲೆ ಅವರ ಪ್ರಕೃತಿ ಚಿತ್ರಗಳು' (ಅಂಕಣ) ಮುಂತಾದ ಕೆಲವು ಲೇಖನಗಳ ಜೊತೆಗೆ ತರುಣ ಕಲಾವಿದ ಜಿ. ಜಯಕುಮಾರ್ ಅವರ ಏಕವ್ಯಕ್ತಿ ಪ್ರದರ್ಶನವೊಂದಕ್ಕೆ (ಆಗಸ್ಟ್-ಸೆಪ್ಟೆಂಬರ್ 1988, ಬೊಂಬಾಯಿ) ಕೆಟಲಾಗನ್ನು ಬರೆದಿದ್ದಾರೆ. ಚಿತ್ರರಚನೆಯಲ್ಲೂ ಗಂಭೀರವಾದ ಆಸಕ್ತಿಯನ್ನು ಹೊಂದಿರುವ ಅವರ ಕಲಾಕೃತಿಯೊಂದು ರಾಜ್ಯ ಲಲಿತಕಲಾ ಅಕಾಡಮಿಯ ಸಂಗ್ರಹದಲ್ಲಿ ಇದೆ.

ಕೆ.ಎಸ್. ಶ್ರೀನಿವಾಸಮೂರ್ತಿ