About the Author

 ನಾಡೋಜ ಡಾ.ಕಯ್ಯಾರ ಕಿಞ್ಞಣ್ಣ ರೈ, ಅಖಿಲಭಾರತ ಮಟ್ಟದಲ್ಲಿ ಜರುಗಿದ 66 ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು.

ಕೇರಳ ರಾಜ್ಯದಲ್ಲಿರುವ ಕಾಸರಗೋಡು ತಾಲೂಕಿನ ಪೆರಡಾಲ ಗ್ರಾಮದಲ್ಲಿ 1915ರ ಜೂನ್ 8 ರಂದು ಜನಿಸಿದರು. ತಂದೆ ದುಗ್ಗಪ್ಪ ರೈ, ತಾಯಿ ದೈಯಕ್ಕೆ. ಪೆರಡಾಲ ಗ್ರಾಮದ ನವಜೀವನ ಪ್ರೌಢಶಾಲೆಯಲ್ಲಿ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು. ಕೇರಳ ಸಂಗೀತ ನಾಟಕ ಆಕಾಡೆಮಿಯ ಸದಸ್ಯರೂ ಆಗಿದ್ದರು. ಅಲ್ಲದೆ ಕಾಸರಗೋಡು ತಾಲೂಕನ್ನು ಕರ್ನಾಟಕ ರಾಜ್ಯಕ್ಕೆ ಸೇರಿಸಲು ಸಹ ಹೋರಾಟ ಮಾಡಿದವರು..

ಶ್ರೀಮುಖ, ಐಕ್ಯಗಾನ, ಪುನರ್ನವ, ಚೇತನ, ಕೊರಗ, ಶತಮಾನದ ಗಾನ, ಗಂಧವತಿ, ಪ್ರತಿಭಾ ಪಯಸ್ವಿನಿ, ಮೊದಲಾದ ಕನ್ನಡ ಕವನ ಸಂಕಲನಗಳನ್ನು ರಚಿಸಿದ್ದಾರೆ. ಕಾರ್ನಾಡ ಸದಾಶಿವರಾವ, ರತ್ನರಾಜಿ, ಏ.ಬಿ.ಶೆಟ್ಟಿ ಮೊದಲಾದವರ ಜೀವನಚರಿತ್ರೆಗಳನ್ನು ಬರೆದು ಪ್ರಕಟಿಸಿದ್ದಾರೆ. ರಾಷ್ಟ್ರಕವಿ ಗೋವಿಂದ ಪೈ ಅವರ ಬಗೆಗೆ ಮೂರು ಗ್ರಂಥಗಳನ್ನು ಬರೆದಿದ್ದಾರೆ.

ಶ್ರೇಷ್ಠ ಅಧ್ಯಾಪಕ ರಾಷ್ಟ್ರಪ್ರಶಸ್ತಿ, 'ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ,  ಮಂಗಳೂರು ವಿ.ವಿ.ಯಿಂದ ಗೌರವ ಡಾಕ್ಟರೇಟ್ ಪದವಿ, ಹಂಪಿ ವಿಶ್ವವಿದ್ಯಾಲಯದ, ನಾಡೋಜ ಪ್ರಶಸ್ತಿ, ಕರ್ನಾಟಕ ಸರಕಾರದ ಸುವರ್ಣ ಕರ್ನಾಟಕ ಏಕೀಕರಣ ಪ್ರಶಸ್ತಿ, ಪಂಪ ಪ್ರಶಸ್ತಿ ಲಭಿಸಿವೆ. 2015ರ ಆಗಸ್ಟ್ 9 ರಂದು ನಿಧನರಾದರು. 

ಕಯ್ಯಾರ ಕಿಞ್ಣಣ್ಣ ರೈ

(08 Jun 1915-09 Aug 2015)