About the Author

ಹುಳಿಯಾರಿನ ಬಿ.ಎಂ.ಎಸ್. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಚಾರ್ಯರಾಗಿ ಕೆಲಸ ಮಾಡುತ್ತಿರುವ ಕೃಷ್ಣಮೂರ್ತಿ ಬಿಳಿಗೆರೆ ಅವರು ಕೃಷಿ ಚರಿತ್ರೆಯ ಅನುಶೋಧನೆಯಲ್ಲಿ ತೊಡಗಿದ್ದಾರೆ. ಸಾವಯವ ಕೃಷಿ ಮತ್ತು ಮಳೆನೀರಿನ ಚಳುವಳಿಯಲ್ಲಿ ಸಕ್ರಿಯವಾಗಿರುವ ಬಿಳಿಗೆರೆಗೆ ತತ್ವಪದ ಮತ್ತು ಕೃಷಿಗಳನ್ನು ಹಾಡುವ ರೂಢಿಯಿದೆ.

ಕಣ್ಮುಚ್ಚಾಲೆ ಮಕ್ಕಳ ಗುಂಪು, ನಮ್ಮ ಪ್ರಕಾಶನ ಮತ್ತು ಸಿರಿಸಮೃದ್ಧಿ ಬಳಗ ಮುಂತಾದ ಸಂಘಟನೆಗಳಲ್ಲಿ ಅವರು ಸಕ್ರಿಯರಾಗಿದ್ದಾರೆ.

ಸಾವಿರ ಕಣ್ಣಿನ ನವಿಲು, ಕಿಂಚಿತ್ತು ಪ್ರೀತಿಯ ಬದುಕು, ದಾಸಯ್ಯ ಇದು ಕನಸೇನಯ್ಯ, ಧರೆ ಮೇಲೆ ಉರಿಪಾದ ಇವು ಇವರ ಕಾವ್ಯ ಕೃತಿಗಳು. ಜೀರಿಂಬೆ ಹಾಡು, ಗುಡು ಗುಡು ಗುಡ್ಡ, ಪದ್ಯದ ಮರ, ಡ್ರೂ ಡ್ರೂ ಡ್ರೂಟೆ, ಹಾಡೆ ಸುವ್ವಿ ಇವು ಮಕ್ಕಳಿಗಾಗಿ ಬರೆದ ಹಾಡಿನ ಪುಸ್ತಕಗಳು. ಮಳೆ ಹುಚ್ಚ, ಅಗಲ ಕಿವಿಯ ಅರಿವುಗಾರ, ನವಿಲೂರಿನ ಕತೆ, ಅಂಗಭಂಗದ ರಾಜ್ಯದಲ್ಲಿ, ಕೇಡಾಳ ಕೆಪ್ಪರ್ಕ, ಕತ್ತೆ ಹಾಡು ಇವು ಮಕ್ಕಳ ನಾಟಕಗಳು. ಚಗಚೆ ಹೂವಿನ ಹುಡುಗಿ, ಭೂಮಂತ್ರಯ್ಯನ ಕತೆಗಳು ಮಕ್ಕಳ ಕಥಾ ಪುಸ್ತಕ. ಮಳೆ ನೀರ ಕೊಯ್ಲು ಕುರಿತ ಪುಸ್ತಕಗಳು ಮಳೆ ನೀರ ಕುಡಿ, ಅನ್ನ ದೇವರ ಮುಂದೆ, ಮರದಡಿಯ ಮನುಷ್ಯ, ಬಿಸ್ಲುಬಾಳೆ ಹಣ್ಣು ಮತ್ತು ಇತರ ಪ್ರಬಂಧಗಳು,

ಬೆಳಿಗೆರೆ ಹಾಡುಗಳು ಸಂಕಲನದಲ್ಲಿ ಕೃಷಿಪದ, ನೀರಪದ ಮತ್ತು ತತ್ವಪದಗಳಿವೆ.  ಇವರ ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ ಎರಡು ಬಾರಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಆರ್ಯಭಟ ಸಾಹಿತ್ಯ ಪ್ರಶಸ್ತಿ, ಜಿ.ಎಸ್.ಎಸ್. ಕಾವ್ಯ ಪ್ರಶಸ್ತಿ,  ಶಿಕ್ಷಣ ಸಿರಿ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ, ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕ ಸೊಗಸು ಪ್ರಶಸ್ತಿಗಳು ಇವರಿಗೆ ಸಂದಿವೆ.

 

ಕೃಷ್ಣಮೂರ್ತಿ ಬಿಳಿಗೆರೆ