About the Author

ಲಕ್ಕೂರು ಸಿ. ಆನಂದ ಅವರು ಮೂಲತಃ ಕೋಲಾರ ಜಿಲ್ಲೆಯ ಲಕ್ಕೂರಿನವರು. ದಲಿತ- ಬಂಡಾಯ ಕಾವ್ಯ ಮಾರ್ಗದ ಮೂರನೇ ತಲೆಮಾರಿನವರಾದ ಅವರು ಸೃಜನಶೀಲ ಬರಹಗಾರ. ಕವಿ, ವಿಮರ್ಶಕ, ಅನುವಾದಕರಾಗಿಯೂ ಗುರುತಿಸಿಕೊಂಡಿರುವ ಆನಂದ ಅವರ ಮಾತೃಭಾಷೆ ತೆಲುಗು. ಪ್ರಸ್ತುತ ಕೆಂಗೇರಿ ಶೇಷಾದ್ರಿಪುರಂ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಲಕ್ಕೂರು ಆನಂದ ಅವರು ಇದುವರೆಗೆ ಐದು ಕವನ ಸಂಕಲನ, ಐದು ಅನುವಾದಿತ ಕೃತಿಗಳು ಹಾಗೂ ಒಂದು ಸಂಶೋಧನಾ ಗ್ರಂಥವನ್ನು ಪ್ರಕಟಿಸಿದ್ದಾರೆ. ಮಾತಂಗ ಮಾದಿಗರ ಸಂಸ್ಕೃತಿಯ ಬಗ್ಗೆ ಆನಂದ ಅವರು ಆಳವಾದ ಅಧ್ಯಯನ ನಡೆಸಿದ್ದಾರೆ.

ತೆಲುಗು ಭಾಷೆಯಿಂದ ಕನ್ನಡಕ್ಕೆ ಅನುವಾದಿಸಿದ ಅತ್ಯುತ್ತಮ ಆತ್ಮ ಕಥೆಗಳೆಂದರೆ, ರಾಣಿ ಶಿವ ಶಂಕರ ಶರ್ಮರ ‘ಕೊನೆಯ ಬ್ರಾಹ್ಮಣ’. ಪ್ರತಿಭಾವಂತ ಕವಿ ಹಾಗೂ ಲೇಖಕ ಆನಂದ ಲಕ್ಕೂರ್ ನೇರ ತೆಲುಗು ಭಾಷೆಯಿಂದ ಕನ್ನಕ್ಕೆ ಅತ್ಯಂತ ಪ್ರಭುದ್ಧ ಭಾಷೆಯಲ್ಲಿ ಸಮರ್ಥವಾಗಿ ಅನುವಾದ ಮಾಡಿದ್ದಾರೆ. ತಮಗೆ ಬಂದ ಪ್ರಶಸ್ತಿಗಳನ್ನು ಅವರು, `ರಾಜ್ಯದ ಎಲ್ಲಾ ದಮನಿತ ಸಮುದಾಯಗಳಿಗೆ' ಅರ್ಪಿಸಿದ್ದಾರೆ. ಊರಿಂದ ಊರಿಗೆ, ಇಪ್ಪತ್ತರ ಕಲ್ಲಿನ ಮೇಲೆ, ಬಟವಾಡೆಯಾಗದ ರಸೀತಿ, ಇತಿ ನಿನ್ನ ವಿಧೇಯನು, ಉರಿವ ಏಕಾಂತ ದೀಪ ಇವರ ಕವನ ಸಂಕಲನಗಳು. ಆನಂದ ಅವರ ಅನುವಾದಿತ ಕೃತಿಗಳು- ಸ್ಮೃತಿ ಕಿಣಾನ್ತಂ, ಕೊನೆ ಬ್ರಾಹ್ಮಣ, ಆಕಾಶ ದೇವರ, ನಗ್ನ ಮುನಿಯ ಸಮಗ್ರ ಕಥೆಗಳು, ಅರುದ್ರ ಇವರ ಅನುವಾದಿತ ಕೃತಿಗಳು. ಶ್ರೀಯುತರ ಸಾಹಿತ್ಯ ಸೇವೆಗಾಗಿ ‘ಕೇಂದ್ರ ಸಾಹಿತ್ಯ ಅಕಾಡೆಮಿ ಯುವ ಪ್ರಶಸ್ತಿ’ ‘ಆಂಧ್ರದ ಶ್ರೀ ಶ್ರೀ ಕಾವ್ಯ ಪುರಸ್ಕಾರ’, ‘ದೆಹಲಿಯ ದಲಿತ ಸಾಹಿತ್ಯ ಪರಿಷತ್ತು ಪ್ರಶಸ್ತಿ, ದು ನಿಂ ಬೆಳಗಲಿ ಪ್ರಶಸ್ತಿ, ವಿಭಾ ಸಾಹಿತ್ಯ ಪ್ರಶಸ್ತಿ, ಕಡೆಂಗೋಡ್ಲು ಶಂಕರಭಟ್ಟ ಪ್ರಶಸ್ತಿ, ಡಾ. ತಿಪ್ಪೇರುದ್ರ ಸ್ವಾಮಿ ಪ್ರಶಸ್ತಿ ಇವರಿಗೆ ಸಂದಿದೆ

ಲಕ್ಕೂರು ಆನಂದ

Awards