About the Author

ಎಂ.ಬಸವಣ್ಣ- ಹುಟ್ಟಿದ್ದು 1933, ಚಾಮರಾಜನಗರ ಜಿಲ್ಲೆಯ ಮಂಗಲ ಗ್ರಾಮದಲ್ಲಿ. ಮೈಸೂರು ವಿಶ್ವವಿದ್ಯಾನಿಲಯದಿಂದ ಪ್ರಾಯೋಗಿಕ ಮನಃಶಾಸ್ತ್ರದಲ್ಲಿ 1955ರಲ್ಲಿ ಎಂ.ಎ.ಪದವಿ. ಕ್ಲಿನಿಕಲ್ ಮನಃಶಾಸ್ತ್ರದಲ್ಲಿ ನಿಮ್ಯಾನ್ಸ್ ನಿಂದ 1958ರಲ್ಲಿ ಡಿಪ್ಲೊಮಾ. 1970ರಲ್ಲಿ ತಿರುಪತಿಯ ವೆಂಕಟೇಶ್ವರ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ. ಇದೇ ವಿಶ್ವವಿದ್ಯಾಲಯದಲ್ಲಿ ಅಧ್ಯಾಪಕರಾಗಿ ಸೇರಿ 1993ರಲ್ಲಿ ಪ್ರಾಧ್ಯಾಪಕರಾಗಿ ವಿಶ್ರಾಂತರಾದರು. ತಮ್ಮ ಸಂಶೋಧನಾ ಲೇಖನಗಳನ್ನು ಪ್ರತಿಷ್ಠಿತ ಪತ್ರಿಕೆಗಳಲ್ಲಿ ಪ್ರಕಟಿಸಿದರು. ಅಧ್ಯಾಪಕ ವೃತ್ತಿಯನ್ನು ಪ್ರೀತಿಸುವ ಬಸವಣ್ಣನವರು ವ್ಯಕ್ತಿತ್ವ ವಿಕಾಸದ ಬಗ್ಗೆ ವಿಶೇಷ ಆಸಕ್ತಿಯನ್ನು ವಹಿಸಿ, ದೇಶದ ಉದ್ದಗಲಕ್ಕೂ ಉಪನ್ಯಾಸಗಳನ್ನು ಕಮ್ಮಟಗಳನ್ನು ನಡೆಸಿದ್ದಾರೆ. ಗುಲ್ಬರ್ಗಾ, ಕರ್ನಾಟಕ ಮತ್ತು ಬೆಂಗಳೂರು ವಿಶ್ವವಿದ್ಯಾಲಯಗಳಲ್ಲಿ ಸಂದರ್ಶಕ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ಇಂದಿಗೂ ಮನಃಶಾಸ್ತ್ರದ ಕ್ರಿಯಾಶೀಲ ವಿದ್ಯಾರ್ಥಿಯಾಗಿ ಅನೇಕ ಸಂಘ-ಸಂಸ್ಥೆಗಳಿಗೆ ಮಾರ್ಗದರ್ಶಕರಾಗಿದ್ದಾರೆ. ಸದ್ಯ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. 

ಪ್ರಕಟಿತ ಕೃತಿಗಳು- ಈಡಿಪಸ್ ಕಾಂಪ್ಲೆಕ್ಸ್(ಮನೋವೈಜ್ಞಾನಿಕ ಲೇಖನಗಳು), ಕಾರ್ಲ್ ಯೂಂಗ್, ಕನಸಿನ ಕಥೆ, ಅರ್ಧನಾರೀಶ್ವರ, ಲೂಸಿಫರ್ ಎಫೆಕ್ಟ್, ಇಂಗ್ಲಿಷಿನಲ್ಲಿಯೂ ಹಲವಾರು ಲೇಖನಗಳು, ಪುಸ್ತಕಗಳು ಪ್ರಕಟಗೊಂಡಿವೆ.

ಎಂ. ಬಸವಣ್ಣ