About the Author

ಹಿರಿಯ ವಿದ್ವಾಂಸ ಎಂ. ಧ್ರುವನಾರಾಯಣ ಅವರು ಜನಿಸಿದ್ದು ನಾರಾಯಣದೇವರಕೆರೆಯಲ್ಲಿ. ರಾಯಚೂರಿನ ಪಂಡಿತ್‌ ತಾರಾನಾಥ ವಿದ್ಯಾಲಯದ ಪ್ರಾಧ್ಯಾಪಕರಾಗಿದ್ದ ಅವರು ನಿವೃತ್ತರಾಗಿ ಬೆಂಗಳೂರು ನಿವಾಸಿಯಾಗಿದ್ದಾರೆ.  ಜೀವನ ಚರಿತ್ರೆ ಅನುವಾದ ಕ್ಷೇತ್ರಗಳಲ್ಲದೆ ಪಠ್ಯ ಪುಸ್ತಕ ರಚನೆ ಮಾಡಿದ್ದಾರೆ. ರಾವ್ ಬಹದ್ದೂರ್, ಪಂಡಿತ ತಾರಾನಾಥ, ಹನುಮಂತಗೌಡ (ಜೀವನ ಚರಿತ್ರೆ), ಡಾ. ಬಾಬಾ ಸಾಹೇಬ ಅಂಬೇಡ್ಕರರ ಬರಹಗಳು, ವಿಜಯನಗರ ಕಾಲದಲ್ಲಿನ ನೀರಾವರಿ ವ್ಯವಸ್ಥೆ (ಅನುವಾದ), ಭಾರತದ ಸಂವಿಧಾನ, ರಾಜ್ಯ ಶಾಸ್ತ್ರ ಮೀಮಾಂಸಕರು, ಸಾರ್ವಜನಿಕ ಆಡಳಿತ (ಪಠ್ಯ ಪುಸ್ತಕಗಳು). ಪಂಡಿತ್‌ ತಾರಾನಾಥ ಅವರ ಸಮಗ್ರ ಕೃತಿಗಳನ್ನು ಸಂಪಾದಿಸಿದ ಹಿರಿಮೆ ಅವರದು.

ಎಂ. ಧ್ರುವನಾರಾಯಣ

(01 Jul 1929)