About the Author

ಪ್ರಭಾಕರ ಕಾರಂತರು ಸಾಮಾಜಿಕ ಕಾರ್ಯಕರ್ತರಾಗಿ, ಪತ್ರಕರ್ತರಾಗಿ, ಸಹೃದಯೀ ಸಾಹಿತ್ಯ ಪ್ರೇಮಿಯಾಗಿ ಬೆಳೆದವರು. ಪಲ್ಲಟಗೊಂಡ ಬದುಕು, ಆಗಿನ ತುಮುಲಗಳು, ಜೊತೆಗೆ ಅವರ ಬಹುಮುಖಿ ಚಟುವಟಿಕೆಗಳು ಅವರ ಅನುಭವದ ಹರವನ್ನು, ಆಳವನ್ನು ಹೆಚ್ಚಿಸಿದೆ. ಹೊಸಕೊಪ್ಪದಂತ ಪುಟ್ಟ ಹಳ್ಳಿಯಲಲ್ಲಿ ಜನಿಸಿದ ಅವರು ಹಿಡಿದು ಕಗ್ಗಾಡಿನ ನಡುವಿನ ಗೀರ್ಲುವಿನ ಹಳ್ಳಿಗನೊಬ್ಬನಾಗಿ ಬಾಳಿದರು. ಎಲ್ಲರ ಬಳಿಯೂ ಯಾವುದೇ ಅಹಂಕಾರ ಅಥವಾ ಕೀಳರಿಮೆಗಳಿಲ್ಲದೇ ಒಡನಾಡಿದ್ದಾರೆ. ಅವರ ಬದುಕಿನಲ್ಲಿನ ಪ್ರಾಮಾಣಿಕತೆ, ಉತ್ತಮ ಸಾಮಾಜಿಕ ಬದುಕಿನ ಬಗ್ಗೆ ಅವರಿಗಿರುವ ತೀವ್ರ ಕಳಕಳಿ, ನಿಷ್ಠೆಗಳು ಅವರ ಬರಹಗಳಲ್ಲೂ ಸಹಜವಾಗಿ ಬಂದಿದೆ. ’ಶೀರ್ನಾಳಿ, ಬೇರು ಪ್ರೀತಿ, ವಿಮರ್ಶಕರ ಅಧ್ವಾನಗಳು’ ಅವರ ಕೃತಿಗಳು. 

ಎಂ.ಎಂ.ಪ್ರಭಾಕರ ಕಾರಂತ