About the Author

ಮ.ಸು.ಕೃಷ್ಣಮೂರ್ತಿ ಅವರು ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ಮಂದಗೆರೆ ಗ್ರಾಮದವರು. 1931ರ ಜೂನ್ 16 ರಂದು ಜನಿಸಿದರು. ತಂದೆ ಎಂ.ಸುಬ್ಬರಾವ್, ತಾಯಿ ನಂಜಮ್ಮ. ಬನಾರಸ ವಿ.ವಿ.ಯಿಂದ ಹಿಂದಿ ಎಂ.ಎ ಹಾಗೂ ಮೈಸೂರು ವಿ.ವಿ.ಯಿಂದ ಪಿಎಚ್ ಡಿ ಪದವೀಧರರು. ಮೈಸೂರು ವಿ.ವಿ. ಹಿಂದಿ ವಿಭಾಗ ಮುಖ್ಯಸ್ಥರಾಗಿ ನಿವೃತ್ತರು. ಕನ್ನಡ, ಸಂಸ್ಕೃತ ಹಾಗೂ ಹಿಂದಿ ಭಾಷೆಯಲ್ಲಿ ಬೋಧನೆ ಮಾಡಿದ ಕೀರ್ತಿ ಇವರದು. 

ಕೃತಿಗಳು: ಫಲ್ಗುಣಿ, ರಥಚಕ್ರ, ಕಸ್ತೂರಿ ಮೃಗ, ನಾದ ಸೇತು, ಹಡಗಿನ ಹಕ್ಕಿ, ಕುರಿ ಸಾಕಿದ ತೋಳ, ಪರಶುರಾಮನ ತಂಗಿಯರು, ಚತುರ್ಮುಖ, ರಥ ಚಕ್ರ, ಒಂಟಿ ಸಲಗ  ಸೇರಿದಂತೆ 60ಕ್ಕೂ ಅಧಿಕ ಕಾದಂಬರಿಗಳನ್ನು ಮತ್ತು ಯುಗಾಂತ, ರತ್ನಕಂಕಣ, ರಂಗಸಪ್ತಕ, ನಾಟ್ಯ ಪಂಚಕ ಹೀಗೆ ಒಟ್ಟು 27 ನಾಟಕಗಳನ್ನು ರಚಿಸಿದ್ದಾರೆ. ವ್ಯೋಮಕೇಶನ ವಷನಗಳು (ಆಧುನಿಕ ವಚನಗಳು), ಸಮುದ್ರ ಸಂಗಮ (ಕಾಲ್ಪನಿಕ ಸಂದರ್ಶನ), ಬಿತ್ತಭಿತ್ತಿಯ ಚಿತ್ರಗಳು, ಗೋಪುರದ ದೀಪ, ಚಿತ್ರಕೂಟ (ರೇಖಾಚಿತ್ರ ಸಂಗ್ರಹ), ಗಂಧ ಮಾಧವ, ಏಕಾಂತ ಸಂಗೀತ, ಹಾದಿ ಪುರಾಣ, ಚಂಕ್ರಮಣ (ಪ್ರಬಂಧ), ಸಿದ್ಧ ಸಾಹಿತ್ಯ, ಹಿಂದಿ ಸಾಹಿತ್ಯ, ಉತ್ತರದ ಸಂತ ಪರಂಪರೆ, ಸೂಫಿ ಪ್ರೇಮ ಕಾವ್ಯ, ಮುಸಲ್ಮಾನ ಭಾಗವತರು, ಬಸವರಾಜ ಮಾರ್ಗ (ಸಂಶೋಧನೆಗಳು), ಕೋಗಿಲೆಯ ಚಿಕ್ಕವ್ವ, ಚಂದಮಾಮನ ಅಳಿಯ, ಚೈತ್ರ ಪಲ್ಲವಿ, ಮೀರಾಬಾಯಿ, ಮೆಣಸಿನಕಾಯಿ ಸಾಹಸ, ಸಂತ ರೈದಾಸ, ಮಹರ್ಷಿ ಕರ್ವೆ, ಕಿತ್ತೂರ ರಾಣಿ ಚೆನ್ನಮ್ಮ, ಕಾಲುಗಳ ಜಗಳ, ಗೋರಾ ಬಾದಲ್‌, ಚೈತ್ರ ಪಲ್ಲವ, ವೈಶಾಖ ಪ್ರಭ(ಅಪ್ರಕಟಿತ), ಆಷಾಢ ಸೋನೆ(ಅಪ್ರಕಟಿತ), ಮಕ್ಕಳ ಅಕ್ಕ(ಅಪ್ರಕಟಿತ) -ಇವು ಮಕ್ಕಳ ಸಾಹಿತ್ಯ,  ಬಾಣಭಟ್ಟನ ಆತ್ಮಕಥೆ, ಅನಾಮದಾಸನ ಕಡತ, ಮೇಘದೂತ ಒಂದು ಕಳೆಯ ಕಥೆ, ಮೃಗನಯನಿ, ಜೈ ಸೋಮನಾಥ, ಕಬೀರ ಪದಾವಲೀ, ಮೀರಾ ಪದಾವಲೀ, ರಾಮಚರಿತ ಮಾನಸ, ವಿನಯ ಪತ್ರಿಕಾ,  ಮೇಘದೂತ, ,ಕೋಮಲ ಗಾಂಧಾರ,  ಬಿಹಾರೀ ಸಪ್ತಶತೀ, ಸೂರ್ಯನ ಏಳನೇ ಕುದುರೆ, ಚಿದಂಬರಾ ಸಂಚಯನ (ಹಿಂದಿಯಿಂದ ಕನ್ನಡಕ್ಕೆ ಅನುವಾದಿತ) ರಾಗಕಾನಡಾ, ಅಪರಾಜಿತ, ಜ್ಯೋತಿ, ಕಲಶ್, (ಹಿಂದಿ ಕಾದಂಬರಿಗಳು), ಅರಣ್ಯಕ, ಬೆಟ್ಟಕ್ಕೆ ಚಳಿಯಾದಡೆ, ಪುನರಾಗಮನ  (ಕಥಾ ಸಂಕಲನ), ಸಂಪಾದನೆ : ನಳ ಚಂಪೂ ಸಂಗ್ರಹ. ಸಂವಾದ ಸಾಹಿತ್ಯ: ಸಮುದ್ರ ಸಂಗಮ (2000)

ಇವರ ಸಾಹಿತ್ಯ ಸೇವೆಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯು 2011ನೇ ಸಾಲಿನ ಗೌರವ ಪ್ರಶಸ್ತಿ ಸಂದಿದೆ. 

ಮ.ಸು. ಕೃಷ್ಣಮೂರ್ತಿ

(16 Jun 1931)