About the Author

ಚಾಮರಾಜನಗರ ತಾಲೂಕಿನ ಮಲೆಯೂರು ಗ್ರಾಮದಲ್ಲಿ ಪ್ರೊ.ಮಲೆಯೂರು ಗುರುಸ್ವಾಮಿ ಅವರು 1947ರ ಆಗಸ್ಟ್ 1ರಂದು ಜನಿಸಿದರು. ತಂದೆ ಶಿವಣ್ಣ, ತಾಯಿ ಮರೆಮ್ಮ. ಪ್ರಸ್ತುತ ಮೈಸೂರಿನ ಹಿನಕಲ್‌ನ ಆಶ್ರಮ ರಸ್ತೆಯ ಮಹಾಮನೆಯಲ್ಲಿ ವಾಸ. ಜೆಎಸ್‌ಎಸ್ ಸಂಸ್ಥೆಯಲ್ಲಿ ವಿಶ್ರಾಂತ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ಗುರುಸ್ವಾಮಿ ಅವರ ಸೃಜನಶೀಲ ಕೃತಿಗಳಾದ ಮಹಾಯಾತ್ರಿಕ, ಅಪ್ರತಿಮವೀರ, ಚರಿತ್ರೆಯ ಪುಟಕ್ಕೆ ಒಂದು ಟಿಪ್ಪಣಿ ಕಾದಂಬರಿಗಳು, ಮಾತೆಂಬುದು ಜ್ಯೋತಿರ್ಲಿಂಗ ವಚನ ಸಾಹಿತ್ಯ, ಶ್ರೀ ಕಾರ್ಯಸ್ವಾಮಿ ಮಠದ ಕ್ಷೇತ್ರ ಚರಿತ್ರೆ, ಶರಣ ಕಿರಣ ವ್ಯಕ್ತಿ ಚಿತ್ರ, ಪ್ರಭುಲಿಂಗ ಲೀಲೆ ವಿಮರ್ಶಾ ಕೃತಿಗಳನ್ನು ರಚಿಸಿದ್ದಾರೆ. 

ಮೂಡಲ ಸೀಮೆಯ ಕಥೆಗಳು, ಕಾಡಂಚಿನ ಕೋಗಿಲೆಗಳ ಕಲರವ, ಕಪಿಲಾ ನದಿಯ ಎಡಬಲದಿ, ಹೆಜ್ಜಿಗೆ ಅಕ್ಕ, ಛಂದೋನಿಜಗುಣ, ರಾಜಪಥ, ಸೋಮಸಿರಿ, ಶಿವಪ್ರಭೆ, ಶಿವಯೋಗ, ಹೊನ್ನಹೊಳೆ, ಶಿವಸಂಪದ ಸೇರಿದಂತೆ ಅನೇಕ ಕೃತಿಗಳನ್ನು  ಸಂಪಾದಿಸಿದ್ದಾರೆ.

ಪ್ರಶಸ್ತಿಗಳು: ಮಹಾಮನ, ಮಹಾಕವಿ ಷಡಕ್ಷರ ದೇವ ಸ್ಮಾರಕ ಪ್ರಶಸ್ತಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ರೋಟರಿ ರಾಜ್ಯೋತ್ಸವ ಪ್ರಶಸ್ತಿ, 2010 - ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಬಂದಿದೆ. 2014 - ಚಾಮರಾಜನಗರ ಜಿಲ್ಲಾ ಐದನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರು, 2017 ರ ಅಕ್ಟೋಬರ್ 22 ರಂದು 'ಮಲೆಯೂರು ನಮ್ಮವರು' ಮಗು 70' ಎಂಬ ಶೀರ್ಷಿಕೆಯಡಿ ಕಲಾಮಂದಿರ, ಮೈಸೂರುನಲ್ಲಿ ಅಭಿನಂದನೆ ಸಲ್ಲಿಸಲಾಗಿದೆ.

 

ಮಲೆಯೂರು ಗುರುಸ್ವಾಮಿ

(01 Aug 1947)