About the Author

ಶಿವರಾಮ ಕಾರಂತರ ಬದುಕು ಬರಹಗಳನ್ನು ಕನ್ನಡ ಓದುಗರಿಗೆ ಉಣಬಡಿಸಿ, ಕಾರಂತರ ವೈಚಾರಿಕ ನೆಲೆ, ಜೀವನ ಪ್ರೀತಿಯನ್ನು ಮತ್ತಷ್ಟು ಅರ್ಥೈಸಿಕೊಳ್ಳುವಲ್ಲಿ ಕೊಡುಗೆ ನೀಡಿದವರು ಕಾದಂಬರಿಗಾರ್ತಿ ಮಾಲಿನಿ ಮಲ್ಯ .ಮೂಲತಃ ಉಡುಪಿಯವರು. ಭಾರತೀಯ ಜೀವವಿಮಾನಿಗಮದ ನಿವೃತ್ತ ಉದ್ಯೋಗಿ.

ಕೃತಿಗಳು: ನಾನು ಕಂಡ ಕಾರಂತರು (ವ್ಯಕ್ತಿಚಿತ್ರ), ಗೊಂದಲಪುರದ ನಿಂದಲರು (ಕಾದಂಬರಿ), ದಾಂಪತ್ಯ ಗಾಥೆ (ಕಿರುಕಾದಂಬರಿ), ಶಿವರಾಮಕಾರಂತರ ಕಿನ್ನರಲೋಕ (ಲೇಖನ ಸಂಗ್ರಹ), ಚಿಣ್ಣರ ಲೋಕದಲ್ಲಿ ಕಾರಂತರು ಭಾಗ 1 ಮತ್ತು 2, ಸಾಹಿತ್ಯೇತರ ಕಾರಂತರು, ಕಾರಂತ ಉವಾಚ,  ’ಶಿವರಾಮ ಕಾರಂತರ ವಾಙ್ಮಯ ವೃತ್ತಾಂತ, ಶಿವರಾಮ ಕಾರಂತರ ಕೃತಿ ಕೈಪಿಡಿ, ಶಿವರಾಮ ಕಾರಂತರ ಲೇಖನಗಳು-8 ಸಂಪುಟಗಳು, ಪಕ್ಷಿಗಳ ಅದ್ಭುತ ಲೋಕ, ಬಾಲಪ್ರಪಂಚ-3’ ಅವರ ಕೃತಿಗಳನ್ನು ರಚಿಸಿದ್ದಾರೆ. ಬೆಂಗಳೂರಿನ ಶಾಶ್ವತಿ ಸಂಸ್ಥೆಯಿಂದ ’ಸದೋದಿತ ಸಾಹಿತ್ಯ ಪ್ರಶಸ್ತಿ’ ಲಭಿಸಿದೆ . 

ಮಾಲಿನಿ ಮಲ್ಯ

(29 Jun 1951)