About the Author

ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಮೊದಲ ಕುಲಪತಿಗಳಾಗಿದ್ದ ಮಲ್ಲೇಪುರಂ ಜಿ. ವೆಂಕಟೇಶ ಅವರು 1952, ಜೂನ್ 5ರಂದು ಬೆಂಗಳೂರು ಜಿಲ್ಲೆಯ ನೆಲಮಂಗಲದಲ್ಲಿ ಜನಿಸಿದರು. ತಂದೆ ಗಂಗಯ್ಯ, ತಾಯಿ ವೆಂಕಟಮ್ಮ.

ಪ್ರಾಥಮಿಕ ಮತ್ತು ಪ್ರೌಢಶಾಲೆ ವಿದ್ಯಾಭ್ಯಾಸ ನೆಲಮಂಗಲದ ಸರ್ಕಾರಿ ಮತ್ತು ಹೈಯರ್‌ಸೆಕೆಂಡರಿ ಶಾಲೆ. ಮೊದಲ ಸಂಸ್ಕೃತ-ಕನ್ನಡ ಗುರುಗಳು ಎಸ್.ವಿ. ರಾಮಸ್ವಾಮಿ ಅಯ್ಯಂಗಾರ್. ಸಿದ್ಧಗಂಗಾ ಮಠದಲ್ಲಿ ಕನ್ನಡ ಪಂಡಿತ್ ಮತ್ತು ಸಂಸ್ಕೃತ ಅಲಂಕಾರವಿದ್ವತ್ ವ್ಯಾಸಂಗ. ವಿದ್ವಾನ್ ಬಿ. ವೆಂಕಟರಾಮಭಟ್ಟ,  ಇವರಲ್ಲಿ ಕಾವ್ಯಾಲಂಕಾರಗಳ ಅಧ್ಯಯನ. ಬೆಂಗಳೂರಿನ ಶ್ರೀರಾಮಕೃಷ್ಣಾಶ್ರಮದಲ್ಲಿ ಸ್ವಾಮಿ ಆದಿದೇವಾನಂದರಿAದ ಅದ್ವೈತ ವೇದಾಂತದ ಅನುಗ್ರಹ. ಮೈಸೂರು ವಿಶ್ವವಿದ್ಯಾಲಯದಿಂದ ಕನ್ನಡ ಎಂ.ಎ., ಮೂರನೇ ರ‍್ಯಾಂಕಿನೊಡನೆ ಕುವೆಂಪು ಚಿನ್ನದ ಪದಕ, ಸಂಸ್ಕೃತ ಎಂ.ಎ., ಉನ್ನತ ಶ್ರೇಣಿಯೊಂದಿಗೆ ತೇರ್ಗಡೆ. ಕನಕಪುರದಲ್ಲಿ ಕನ್ನಡ ಶಿಕ್ಷಕರಾಗಿ ವೃತ್ತಿಜೀವನ ಪ್ರಾರಂಭ. ಬೆಂಗಳೂರಿನ ಮಹಾನಗರ ಪಾಲಿಕೆಯ ಪ್ರೌಢಶಾಲೆಯಲ್ಲಿ ಕನ್ನಡ ಪಂಡಿತ.

1992ರಲ್ಲಿ ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ಪ್ರವೇಶ. ಅಲ್ಲಿ ಪ್ರವಾಚಕ, ಅಧ್ಯಯನಾಂಗದ ನಿರ್ದೇಶಕ 1998ರಲ್ಲಿ ಕುಲಸಚಿವ.2001ರಲ್ಲಿ ಕರ್ನಾಟಕ ಸರ್ಕಾರದ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ. 20004ರಲ್ಲಿ ಕನ್ನಡ ವಿಶ್ವವಿದ್ಯಾಲಯ ಹಂಪಿ, ಡೀನ್ ಮತ್ತು ಪ್ರಸಾರಾಂಗದ ನಿರ್ದೇಶಕ, 2008ರಲ್ಲಿ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ವಿಶೇಷಾಧಿಕಾರಿಯಾಗಿ ನೇಮಕ. 2010 ಮೇ 26ರಂದು ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಪ್ರಥಮ ಕುಲಪತಿ. 2015ರಿಂದ ಕಲಬುರಗಿಯ ಪಾಲಿ ಇನ್‌ಸ್ಟಿಟ್ಯೂಟ್ ಸಂಸ್ಥೆಯ ಗೌರವ ನಿರ್ದೇಶಕ.

ವಿಮರ್ಶಾ ಕ್ಷೇತ್ರದಲ್ಲಿ ಹೆಸರು ಮಾಡಿರುವ ಅವರು ಶಂಬಾ ಅಧ್ಯಯನ, ಸಂಸ್ಕೃತಿ ಮತ್ತು ಶಂಬಾ, ಸಾಹಿತ್ಯ ಮತ್ತು ಪುರಾಣ, ಪ್ರವಾಸ ಸಾಹಿತ್ಯ - ಒಂದು ಅಧ್ಯಯನ, ಡಾ. ಶಂಬಾ ಜೋಶಿಯವರ ಸಮಗ್ರ ಸಂಪುಟಗಳು (6 ಸಂಪುಟಗಳು), ಕಾವ್ಯಶಾಸ್ತ್ರ ಪರಿಭಾಷೆ, ಶಂಬಾ. ಜೋಷಿಯವರ ಆಯ್ದ ಲೇಖನಗಳು (ಸಂಪಾದನೆ) -ಇತ್ಯಾದಿ ಕೃತಿ ಪ್ರಕಟಿಸಿದ್ದಾರೆ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾಗಿ ಸೇವೆಸಲ್ಲಿಸಿರುವ (2001-2004) ಅವರು ವೇದ ಉಪನಿಷತ್ ಗಳನ್ನು ಆಧುನಿಕ ರೀತಿಯಲ್ಲಿ ಅಧ್ಯಯನ ಮಾಡುತ್ತಿದ್ದಾರೆ.

ಎಂಬತ್ತಕ್ಕೂ ಹೆಚ್ಚು ಸಾಹಿತ್ಯ, ಸಂಸ್ಕೃತಿ ಮತ್ತು ಭಾಷೆಗೆ ಸಂಬಂಧಿಸಿದಂತೆ ಪುಸ್ತಕಗಳ ಪ್ರಕಟಣೆ. ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ 2008ರಲ್ಲಿ ಗೌರವ ಪ್ರಶಸ್ತಿ ಹಾಗೂ 2009ರಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, 2011ರಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಡಾ. ಬಿ.ಆರ್. ಅಂಬೇಡ್ಕರ್ ಪ್ರಶಸ್ತಿ. 2012ರಲ್ಲಿ ಸಿದ್ಧಗಂಗಾ ಮಠದಿಂದ ‘ಸಿದ್ಧಗಂಗಾಶ್ರೀ’ ಪ್ರಶಸ್ತಿ. 2016ರಲ್ಲಿ -ಶಾಸ್ತ್ರ ಚೂಡಾಮಣಿಯಾಗಿ ರಾಷ್ಟ್ರೀಯ ಸಂಸ್ಕೃತ ಸಂಸ್ಥಾನ, ನವದೆಹಲಿಯಿಂದ ಆಯ್ಕೆ. 2017ರಲ್ಲಿ ಶಿವಗಂಗೆಯ ಮೇಲಣಗವಿಮಠದಿಂದ ‘ಶಿವಗಂಗಾಶ್ರೀ’ ಪ್ರಶಸ್ತಿ ಮತ್ತು ಬೆಂಗಳೂರಿನ ಬಸವ ವೇದಿಕೆ ಸಂಸ್ಥೆಯಿಂದ ‘ವಚನ ಸಾಹಿತ್ಯಶ್ರೀ’ ಪ್ರಶಸ್ತಿ. 2018ರಲ್ಲಿ ಸಂಸ್ಕೃತಿ ಪ್ರಕಾಶನ ಸೇಡಮ್ `ಸಂಸ್ಕೃತಿ ಸಮ್ಮಾನ್’ ಪ್ರಶಸ್ತಿ. ಅಮ್ಮೆಂಬಳ ಶಂಕರನಾರಾಯಣ ನಾವಡ ಪ್ರತಿಷ್ಠಾನದಿಂದ `ಅಮ್ಮೆಂಬಳ ಸಾಹಿತ್ಯ ಪ್ರಶಸ್ತಿ;, 2020ರಲ್ಲಿ ಹಾವೇರಿಯ ಬಸವಕೇಂದ್ರ, ಶ್ರೀ ಹೊಸಮಠದಿಂದ `ಡಾ.ಶಿಮುಶ ಪ್ರಶಸ್ತಿ’, ಕನ್ನಡ ಸಾಹಿತ್ಯ ಪರಿಷತ್ತಿನ ‘ಆಜೀವ ಸದಸ್ಯ ಪುರಸ್ಕಾರ’, ಸಾಗರದ ಪ್ರಜ್ಞಾಭಾರತಿ ವಿದ್ಯಾಮಂದಿರದಿAದ ‘ವಿದ್ವಾನ್ ಎನ್.ರಂಗನಾಥಶರ್ಮಾ ಸಂಸ್ಕೃತಿ ಪುರಸ್ಕಾರ’.

ಮಲ್ಲೇಪುರಂ ಜಿ. ವೆಂಕಟೇಶ್‌

(05 Jun 1952)

BY THE AUTHOR

ABOUT THE AUTHOR