About the Author

ಮೋಹನ ಆರ್ ಅವರು ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಸ್ನಾತಕೋತ್ತರ ಪದವಿಯನ್ನು ಉನ್ನತ ಶ್ರೇಣಿಯಲ್ಲಿ ಮುಗಿಸಿ, ಪುಣೆಯ ಡೆಕ್ಕನ್ ಕಾಲೇಜಿನಿಂದ ಪಿಎಚ್.ಡಿ ಪದವಿ ಪಡೆದವರು. ಕಲಬುರ್ಗಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾನಿಲಯದಲ್ಲಿ ಕೆಲಕಾಲ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸಿರುತ್ತಾರೆ. ಪ್ರಸ್ತುತ UGC ಕೊಡಮಾಡುವ ಸರ್ವಪಲ್ಲಿ ರಾಧಾಕೃಷ್ಣನ್ ಪೋಸ್ಟ್ ಡಾಕ್ಟರಲ್ ಫೆಲೊ ಆಗಿ ಡೆಕ್ಕನ್ ಕಾಲೇಜಿನಲ್ಲಿ ಅಧ್ಯಯನ ನಡೆಸುತ್ತಿದ್ದಾರೆ.ಪುರಾತತ್ವ ನೆಲೆ ಮತ್ತು ಪ್ರಾಗೈತಿಹಾಸಿಕ ಚಿತ್ರಕಲೆಯ ನಿರಂತರ ಸಂಶೋಧನೆ ಮತ್ತು ಅಧ್ಯಯನದಲ್ಲಿ ತೊಡಗಿರುವ ಇವರು 30ಕ್ಕೂ ಹೆಚ್ಚು ಲೇಖನಗಳನ್ನು ಪ್ರಕಟಿಸಿದ್ದಾರೆ. 2015ರಲ್ಲಿ ಗ್ರೇಟ್ ಬ್ರಿಟನ್ ವಿಕ್ಟೋರಿಯಾ ಮತ್ತು ಆಲ್ಬರ್ಟ್ ಮ್ಯೂಸಿಯಂನ ನೆಹರೂ ಪ್ರಶಸ್ತಿ,  2016ರಲ್ಲಿ ತಮಿಳುನಾಡಿನ ತಿರುಚನಾಪಳ್ಳಿಯಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಮೊದಲ ಸ್ವತಂತ್ರ ಸಂಶೋಧಕರ ಸಮ್ಮೇಳನದಲ್ಲಿ ಇವರು ಮಂಡಿಸಿದ ಪ್ರಬಂಧಕ್ಕೆ ಅನಿತಾಕುಮಾರ್ ಪ್ರಶಸ್ತಿ ಇವರಿಗೆ ಲಭಿಸಿದೆ. 

ಮೋಹನ ಆರ್