About the Author

ನ. ರವಿಕುಮಾರ್ ಅವರು ಮೂಲತಃ ತುಮಕೂರಿನವರು. ಕುಣಿಗಲ್ ತಾಲೋಕಿನ ಪುಟ್ಟಯ್ಯನಪಾಳ್ಯ, ಹಾಲಶೆಟ್ಟಿಹಳ್ಳಿ, ಕೆಂಪಸಾಗರ, ಬೆಂಗಳೂರು ಮತ್ತು ಮೈಸೂರುಗಳಲ್ಲಿ ವಿದ್ಯಾಭ್ಯಾಸ ಪೂರ್ಣಗೊಳಿಸಿದ ಅವರು, ಎಸ್.ಕೆ. ಎಫ್. ಬೇರೀಂಗ್ಸ್ ಕಾರ್ಖಾನೆಯಲ್ಲಿ 25 ವರ್ಷಗಳ ದುಡಿದಿದ್ದಾರೆ. ಆನಂತರ ‘ಅಭಿನವ’ ಪ್ರಕಾಶನವನ್ನು ಆರಂಭಿಸಿ ಆ ಮೂಲಕ ವಿವಿಧ ಲೇಖಕರ  500ಕ್ಕೂ ಹೆಚ್ಚು ಪುಸ್ತಕಗಳನ್ನು ಪ್ರಕಟಿಸಿದ್ದಾರೆ. ಹಾಗೂ ಅಭಿನವ ಚಾತುರ್ಮಾಸಿಕ ಪತ್ರಿಕೆಯ ಸಂಪಾದಕರಾಗಿಯೂ ಕಾರ್ಯನಿರ್ವಹಿಸಿದ್ದಾರೆ.
ಉಪನಿಷತ್ತು(2018), ಮಕ್ಕಳಿಗಾಗಿ ಕೆ.ಎಸ್ . ನರಸಿಂಹಸ್ವಾಮಿ,  ಆಯ್ದ ವಿಮರ್ಶೆಗಳು, ದೇವರ ಗೊಡವೆ ಕೂಡಾ ನನಗೆ ಬೇಡ, ಮನುಕುಲದ ಮಾತುಗಾರ, ಮಾತು ತಲೆ ಎತ್ತಿದ ಬಗೆ ಅವರ ಪ್ರಕಟಿತ ಕೃತಿಗಳು. 

ಕರ್ನಾಟಕ ಪ್ರಕಾಶಕರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿರುವ ನ. ರವಿಕುಮಾರ್ ಅವರು ನಾರಾಯಣ ಜೋಷಿ ಚಾರಿಟಬಲ್ ಟ್ರಸ್ಟ್ (ರಿ)ನ ಖಜಾಂಚಿಯಾಗಿ, ಕೆ.ಎಸ್.ನರಸಿಂಹಸ್ವಾಮಿ ಟ್ರಸ್ಟ್ (ರಿ), ಮಂಡ್ಯ, ವಿನಾಯಕ ವಾಜ್ಞಯ ಟ್ರಸ್ಟ್(ರಿ)ಗಳಲ್ಲಿ ಸದಸ್ಯರಾಗಿಯೂ ಸೇವೆಸಲ್ಲಿಸುತ್ತಿದ್ದಾರೆ. ಅನೇಕ ವೇದಿಕೆಗಳಲ್ಲಿ ಪ್ರಬಂಧ ಮಂಡನೆ ಮತ್ತು ಪ್ರಮುಖ ಪತ್ರಿಕೆಗಳಲ್ಲಿ ಅವರ ಹಲವು ಬರಹಗಳು ಪ್ರಕಟನೆಯಾಗಿವೆ.  

ಕನ್ನಡ ಸಾಹಿತ್ಯ ಪರಿಷತ್ ಅತ್ಯುತ್ತಮ ಪ್ರಕಾಶನ ಸಂಸ್ಥೆಗೆ ನೀಡುವ ‘ಅಂಕಿತ’ ಪುಸ್ತಕ ಪ್ರಶಸ್ತಿ, ಕನ್ನಡ ಬರಹಗಾರರು ಮತ್ತು ಪ್ರಕಾಶಕರ ಸಂಘದ ಕಣ್ವ ವರ್ಷದ ಪ್ರಕಾಶಕ ಪ್ರಶಸ್ತಿ, ಕನ್ನಡ ಪುಸ್ತಕ ಪ್ರಾಧಿಕಾರದ ಜಿ.ಪಿ.ರಾಜರತ್ನಂ ಪರಿಚಾರಕ ಪ್ರಶಸ್ತಿಗಳು ಸಂದಿವೆ. 

ನ. ರವಿಕುಮಾರ್

(02 Feb 1969)