About the Author

ಲೇಖಕ ನಾಗೇಂದ್ರ. ಪಿ ಅವರು ಮೂಲತಃ ಹಾವೇರಿ ಜಿಲ್ಲೆಯ ರಟ್ಟೀಹಳ್ಳಿ ತಾಲೂಕಿನ ಯಲಿವಾಳ ಗ್ರಾಮದವರು. ತಂದೆ-ಪಕ್ಕೀರಪ್ಪ ಚಿಕ್ಕಪ್ಪನವರ, ತಾಯಿ- ರೇಣುಕಮ್ಮ ಚಿಕ್ಕಪ್ಪನವರ. ಸದ್ಯ ಮುಂಡಗೋಡ ತಾಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಿ.ಪಿ.ಟಿ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿರುವ ನಾಗೇಂದ್ರ ಅವರು ‘ಬಸವಣ್ಣನವರ ವಚನಗಳಲ್ಲಿ ಮಾದಾರ ಚೆನ್ನಯ್ಯ’ ಎಂಬ ಸಂಶೋಧನಾತ್ಮಕ ಕೃತಿಯನ್ನು ಪ್ರಕಟಿಸಿದ್ದಾರೆ. ಈ ಕೃತಿಯು 07-01-2022ರಂದು ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು ಇವರ ಆಶ್ರಯದಲ್ಲಿ ನಡೆದ ಯುವಬರಹಗಾರರ ಚೊಚ್ಚಲ ಕೃತಿ ಬಿಡುಗಡೆ ಸಮಾರಂಭದಲ್ಲಿ ಬಿಡುಗಡೆಗೊಂಡಿದೆ. ಶಿಕ್ಷಕ ವೃತ್ತಿಯ ಜೊತೆಗೆ ಸಾಹಿತ್ಯ ಕ್ಷೇತ್ರದಲ್ಲಿಯೂ ತೊಡಗಿಸಿಕೊಂಡಿರುವ ಅವರು ಸಂಶೋಧನಾ ವಿದ್ಯಾರ್ಥಿಯಾಗಿದ್ದು ‘ಆಧುನಿಕ ಕನ್ನಡ ಸಾಹಿತ್ಯದಲ್ಲಿ ಹೋರಾಟದ ಹಾಡುಗಳು’ ಎಂಬ ವಿಷಯದಲ್ಲಿ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಸಂಶೋಧನೆ ಕೈಗೊಂಡಿದ್ದಾರೆ.

ನಾಗೇಂದ್ರ. ಪಿ

(23 May 1986)