About the Author

ನರಹಳ್ಳಿ ಬಾಲಸುಬ್ರಹ್ಮಣ್ಯ ಅವರು ಕನ್ನಡದ ಪ್ರಮುಖ ವಿಮರ್ಶಕರಲ್ಲಿ ಒಬ್ಬರು. ಮಂಡ್ಯ ಜಿಲ್ಲೆಯ ನರಹಳ್ಳಿಯಲ್ಲಿ1953 ಸೆಪ್ಟೆಂಬರ್ 5ರಂದು ಜನಿಸಿದರು. 1973ರಲ್ಲಿ ಬಿ.ಎ. (ಆನರ್), 1975ರಲ್ಲಿ ಎಂ.ಎ. ಪದವಿಗಳನ್ನು ಪ್ರಥಮ ಬ್ಯಾಂಕ್, ಚಿನ್ನದ ಪದಕಗಳೊಂದಿಗೆ ಪಡೆದ ಅವರು ವಿದ್ಯಾರ್ಥಿ ದೆಸೆಯಲ್ಲಿಯೇ ರಾಜ್ಯಪ್ರಶಸ್ತಿ ಮನ್ನಣೆ ಗಳಿಸಿದ್ದರು. ಭಾರತ ಸರ್ಕಾರದ ಪ್ರತಿಭಾ ವಿದ್ಯಾರ್ಥಿವೇತನ ಪಡೆದವರು.
1992ರಲ್ಲಿ ಬೆಂಗಳೂರು ವಿಶ್ವವಿದ್ಯಾಲಯದಿಂದ ಪಿಎಚ್.ಡಿ.  ಪಡೆದಿರುವ ನರಹಳ್ಳಿಯವರು ಶೇಷಾದ್ರಿಪುರಂ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ, ಸ್ನಾತಕೋತ್ತರ ಅಧ್ಯಯನ ಕೇಂದ್ರದ ನಿರ್ದೇಶಕರಾಗಿ, ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸಿ ನಿವೃತ್ತರಾಗಿದ್ದಾರೆ.

'ಅನುಸಂಧಾನ', 'ನವ್ಯತೆ', 'ಇಹದ ಪರಿಮಳದ ಹಾದಿ', 'ಸಾಹಿತ್ಯ ಸಂಸ್ಕೃತಿ', “ಕುವೆಂಪು ನಾಟಕಗಳ ಅಧ್ಯಯನ', ಕುವೆಂಪು ಕಾವ್ಯ: ಸಂಸ್ಕೃತಿ ಚರಿತ್ರೆಯ ರೂಪಕ', 'ಅನಕೃ ಮತ್ತು ಕನ್ನಡ ಸಂಸ್ಕೃತಿ', 'ನೆಲಸಂಸ್ಕೃತಿ', 'ಸಂಸ್ಕೃತಿ ಪಥ', 'ಹಣತೆಯ ಹಾಡು' ,ʼಕುವೆಂಪು ಕಥನಾ ಕೌಶಲ್ಯʼ, ʼ ಬಾ ಕುವೆಂಪು ದರ್ಶನಕೆʼ  – ಮುಖ್ಯ ವಿಮರ್ಶಾ ಕೃತಿಗಳು.

'ಅಂತರಂಗದ ಮೃದಂಗ' ಪ್ರಬಂಧ ಸಂಕಲನ, 'ಸಿಂಗರ್ ಕಥೆಗಳು', 'ಮಾರ್ಕ್ವೇಸ್ ಕಥೆಗಳು', ’ಕಡಿದಾದ ಹಾದಿ' (ಆಂದ್ರೆ ಜೀದ್ ಕಾದಂಬರಿ) - ಅನುವಾದಗಳು.

’ಕನ್ನಡ ವಿಮರ್ಶಾ ವಿವೇಕ', 'ನೆಲದನಿ' ಇವರಿಗೆ ಅರ್ಪಿಸಿದ ಗೌರವ ಗ್ರಂಥಗಳು. ವಿ. ಎಂ. ಇನಾಂದಾರ್ ಪ್ರಶಸ್ತಿ, ಜಿ.ಎಸ್.ಎಸ್. ಪ್ರಶಸ್ತಿ, ಶಿವರಾಮ ಕಾರಂತ ಪ್ರಶಸ್ತಿ, ಅ.ನ.ಕೃ. ಪ್ರಶಸ್ತಿ, ಕಾವ್ಯಾನಂದ ಪ್ರಶಸ್ತಿ, ಸ. ಸ. ಮಾಳವಾಡ ಪುರಸ್ಕಾರ, ವಿಶ್ವಮಾನವ ಪ್ರಶಸ್ತಿ, ಆರ್ಯಭಟ ಪ್ರಶಸ್ತಿ, ಗೋರಖನಾಥ ಪುರಸ್ಕಾರ, ಕೆಂಪೇಗೌಡ ಪ್ರಶಸ್ತಿ ಮೊದಲಾದ ಗೌರವಗಳಿಗೆ ಪಾತ್ರರಾಗಿದ್ದಾರೆ.

ನರಹಳ್ಳಿ ಬಾಲಸುಬ್ರಹ್ಮಣ್ಯ

(05 Sep 1953)

BY THE AUTHOR

ABOUT THE AUTHOR