About the Author

ಪಿ. ನಾಗರಾಜ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೊಡ್ಲಹಳ್ಳಿ ಗ್ರಾಮದಲ್ಲಿ ಜನಿಸಿದರು. ತಾಯಿ ದೇವಿರಮ್ಮ ತಂದೆ ಲೇ. ವಿ. ಪಾತಯ್ಯನವರು. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಹುಟ್ಟೂರಲ್ಲಿ ಮುಗಿಸಿ, ನಂತರ ಪದವಿಪೂರ್ವ ಮತ್ತು ಪದವಿ ಶಿಕ್ಷಣವನ್ನು ಚಿತ್ರದುರ್ಗದ ಸರ್ಕಾರಿ ಕಲಾ ಕಾಲೇಜಿನಲ್ಲಿ ಪೂರೈಸಿದರು. ಅನಂತರ ಬೆಂಗಳೂರು ವಿಶ್ವವಿದ್ಯಾಲಯದ 'ಕನ್ನಡ ಅಧ್ಯಯನ ಕೇಂದ್ರ'ದಲ್ಲಿ ಕನ್ನಡ ಸ್ನಾತಕೋತ್ತರ ಪದವಿಯನ್ನು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಗೊಂಡು ಅದೇ ವಿಶ್ವವಿದ್ಯಾಲಯದಿಂದ “ಹಿರಿಯೂರು ತಾಲ್ಲೂಕಿನ ಕಾಡುಗೊಲ್ಲರು: ಒಂದು ಸಾಂಸ್ಕೃತಿಕ ಅಧ್ಯಯನ” ಎಂಬ ಪ್ರೌಢ ಪ್ರಬಂಧಕ್ಕೆ ಡಾಕ್ಟರೇಟ್ ಪದವಿಯನ್ನು ಪಡೆದರು. ಬೆಂಗಳೂರಿನ ವಿಜಯ ಪದವಿ ಕಾಲೇಜಿನಲ್ಲಿ ಹದಿನಾಲ್ಕು ವರ್ಷ ಅಧ್ಯಾಪಕ ವೃತ್ತಿಯನ್ನು ನಿರ್ವಹಿಸಿದರು. ರಾಷ್ಟ್ರೀಯ ಸೇವಾ ಯೋಜನಾ ಘಟಕದಲ್ಲಿ ಕಾರ್ಯಕ್ರಮಾಧಿಕಾರಿಯಾಗಿ ಸೇವೆಯನ್ನು ಸಲ್ಲಿಸಿದರು. ಕುವೆಂಪು, ಬೇಂದ್ರೆ, ಕೆ.ಎಸ್.ನರಸಿಂಹಸ್ವಾಮಿ ಹಾಗೂ ಜಿ. ಪಿ. ರಾಜರತ್ನಂರವರನ್ನು ಕುರಿತು ರಾಜ್ಯಮಟ್ಟದ ವಿಚಾರ ಸಂಕಿರಣಗಳನ್ನು ಸಂಘಟಿಸಿದ್ದಾರೆ. ರಾಜ್ಯದ ನಾನಾ ಭಾಗಗಳಲ್ಲಿ ನಡೆದ ರಾಜ್ಯ ಮತ್ತು ರಾಷ್ಟ್ರಮಟ್ಟದ ವಿಚಾರ ಸಂಕಿರಣಗಳಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ, ಪ್ರಬಂಧ ಮಂಡನಕಾರರಾಗಿ ಭಾಗವಹಿಸಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯ ಸಾಧನೆ, ಬಿ.ಎಂ.ಶ್ರೀ. ಪ್ರತಿಷ್ಠಾನದ ಲೋಚನ, ಕನ್ನಡ ಸಾಹಿತ್ಯ ಪರಿಷತ್ತಿನ ಪರಿಷತ್‌ ಪತ್ರಿಕೆ ಇವುಗಳಲ್ಲಿ ಸಂಶೋಧನಾತ್ಮಕ ಲೇಖನಗಳು ಪ್ರಕಟವಾಗಿವೆ. ಬೆಂಗಳೂರು ವಿಶ್ವವಿದ್ಯಾಲಯದ ಪದವಿ ಪಠ್ಯವನ್ನು ಸಂಪಾದಿಸಿ ಕೊಟ್ಟಿದ್ದಾರೆ. ಪ್ರಸ್ತುತ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಶಾಸ್ತ್ರೀಯ ಕನ್ನಡ ಭಾಷಾ ಅಧ್ಯಯನ ಸಂಸ್ಥೆಯಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿರುವರು.

ಕೃತಿಗಳು: ಹಿರಿಯೂರು ತಾಲ್ಲೂಕಿನ ಕಾಡುಗೊಲ್ಲರು: ಒಂದು ಸಾಂಸ್ಕೃತಿಕ ಅಧ್ಯಯನ, ಪಿಎಚ್‌.ಡಿ. ಪ್ರೌಢಪ್ರಬಂಧ. ಅನುಭೂತಿ, ಚನ್ನಬಸವಣ್ಣ, ಚಹರೆ, ಪರಿಶೋಧ.

ಪ್ರಶಸ್ತಿಗಳು: 'ಅನುಭೂತಿ' ಕೃತಿಗೆ 2013ರಲ್ಲಿ ಹೊಂಬೆಳಕು ಸಾಂಸ್ಕೃತಿಕ ಸಂಘ (ರಿ), ಮತ್ತು ಬೆಳಗಾವಿ ರಾಜ್ಯಮಟ್ಟದ ರಾಷ್ಟ್ರಕೂಟ ಸಾಹಿತ್ಯಶ್ರೀ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಪರಿಶೋಧ ಕೃತಿಗೆ 2018ಲ್ಲಿ ರಾಜ್ಯಮಟ್ಟದ ಪ್ರೊ. ಮಲ್ಲೇಪುರಂ ಸಾಂಸ್ಕೃತಿಕ ಪ್ರತಿಷ್ಠಾನ , ಕಲಬುರ್ಗಿ ಕೊಡಮಾಡುವ 'ಉರಿಲಿಂಗ ಪೆದ್ದಿ ಪುಸ್ತಕಪ್ರಶಸ್ತಿ' 

ಪಿ. ನಾಗರಾಜ