About the Author

ಪುತ್ತೂರು ವಿವೇಕಾನಂದ ಕಾಲೇಜಿನ ಪ್ರಾಂಶುಪಾಲರಾಗಿರುವ ಪೀಟರ್‌ ವಿಲ್ಸನ್‌ ಪ್ರಭಾಕರ ಅವರು ಕಳೆದ ಮೂರುವರೆ ದಶಕಗಳಿಂದ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಪಂಥಗಳಲ್ಲಿ ನಂಬಿಕೆ ಇಲ್ಲ ಎನ್ನುವ ಅವರಿಗೆ ನಾಡಿನ ಸರ್ವಾಂಗೀಣ ಅಭಿವೃದ್ಧಿಯ ಬಗ್ಗೆ ವಿಶೇಷ ಕಾಳಜಿ-ಆಸಕ್ತಿ. ಅವರು  ಪುತ್ತೂರು ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು.

1960ರಲ್ಲಿ ಮಂಗಳೂರು ಸಮೀಪದ ಕೋಣಾಜೆಯಲ್ಲಿ ಜನಿಸಿದ ಪ್ರಭಾಕರ ಅವರ ತಂದೆ ಡಿ.ಎಸ್‌. ಕೋಟ್ಯಾನ್ ಮತ್ತು ತಾಯಿ ಲಿಲಿ. ಕೋಣಾಜೆಯಲ್ಲಿಯೇ ಪ್ರಾಥಮಿಕ ಶಿಕ್ಷಣ ಪಡೆದ ಅವರು ನಂತರ ಮಂಗಳೂರಿನ ಸರ್ಕಾರಿ ಪದವಿ ಕಾಲೇಜಿನ ವಿದ್ಯಾರ್ಥಿಯಾಗಿ ಪದವಿ ಪಡೆದರು. ಮಂಗಳೂರು ವಿಶ್ವವಿದ್ಯಾಲಯದ  ಇತಿಹಾಸ ವಿಭಾಗದಲ್ಲಿ ಎಂ.ಎ. ಮೊದಲ ಬ್ಯಾಚಿನ ವಿದ್ಯಾರ್ಥಿಯಾಗಿದ್ದರು. ಡಾ. ಸುರೇಂದ್ರರಾವ್ ಅವರ ಮಾರ್ಗದರ್ಶನದಲ್ಲಿ ’ದಕ್ಷಿಣ ಕನ್ನಡದಲ್ಲಿ ಬಾಸೆಲ್‌ ಮಿಷನ್‌’ ವಿಷಯದಲ್ಲಿ ಅಧ್ಯಯನ ನಡೆಸಿ ಪಿಎಚ್‌.ಡಿ. ಪದವಿ ಪಡೆದರು. ವಿವೇಕಾನಂದ ಕಾಲೇಜಿನ ಇತಿಹಾಸ ವಿಭಾಗದ ಅಧ್ಯಾಪಕರಾಗಿ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸಿದ್ದಾರೆ.

ವಿಟ್ಲದ ಕ್ರಾಂತಿ, ಪುತ್ತೂರು ತಾಲ್ಲೂಕು ಇತಿಹಾಸ ದರ್ಪಣ, ಕಂಡಾಯ ಶಬ್ದಗಳ ಕೋಶ, ಮಂಗಳೂರು ಹಂಚು ಸೇರಿದಂತೆ 17ಕ್ಕೂ ಹೆಚ್ಚು ಪುಸ್ತಕಗಳನ್ನು ಪ್ರಕಟಿಸಿದ್ದಾರೆ.

 

ಪೀಟರ್ ವಿಲ್ಸನ್ ಪ್ರಭಾಕರ