About the Author

ಪ್ರಸನ್ನ ಸಂತೇಕಡೂರು, ಮೂಲತಃ ಶಿವಮೊಗ್ಗ ಸಮೀಪದ ಸಂತೇಕಡೂರಿನವರು. ಶಿವಮೊಗ್ಗದ ಸಹ್ಯಾದ್ರಿ ವಿಜ್ಞಾನ ಕಾಲೇಜಿನಲ್ಲಿ ಬಿಎಸ್ಸಿ ಪದವಿ, ಮೈಸೂರು ವಿಶ್ವವಿದ್ಯಾಲಯದಿಂದ ಜೈವಿಕ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಮತ್ತು ಡಾಕ್ಟರೇಟ್ ಪದವಿ ಪಡೆದು, ಸುಮಾರು ಹತ್ತು ವರ್ಷಗಳ ಕಾಲ ಅಮೇರಿಕಾದಲ್ಲಿ ನೆಲೆಸಿದ್ದರು.

ಮೊದಲು ವರ್ಜಿನೀಯಾ ಸಂಸ್ಥಾನದ ರಿಚ್ಮಂಡ್ ನಗರದ ವರ್ಜಿನೀಯಾ ಕಾಮನ್ ವೆಲ್ತ್ ವಿಶ್ವವಿದ್ಯಾಲಯದಲ್ಲಿ ಪೋಸ್ಟ್ ಡಾಕ್ಟೋರಲ್ ಫೆಲೋ ಆಗಿ ನಂತರ ಅಲ್ಲಿಯೇ ಹಂಟರ್ ಹೊಲ್ಮ್ ಮ್ಯಾಕ್ವಾಯಿರ್ ಸಂಶೋಧನಾ ಕೇಂದ್ರ ಮತ್ತು ವರ್ಜಿನೀಯಾ ಕಾಮನ್ ವೆಲ್ತ್ ವಿಶ್ವವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸಿದ್ದಾರೆ.

ಭಾರತ ಸರ್ಕಾರದ ಜೈವಿಕ ತಂತ್ರಜ್ಞಾನ ಇಲಾಖೆಯಿಂದ ವಿದೇಶಗಳಲ್ಲಿರುವ ಭಾರತೀಯ ಪ್ರತಿಭಾವಂತ ವಿಜ್ಞಾನಿಗಳಿಗೆ ಕೊಡಲ್ಪಡುವ ಹೆಸರಾಂತ ರಾಮಲಿಂಗಸ್ವಾಮಿ ಫೆಲೋಶಿಪ್ ಅನ್ನು ಪಡೆದು ಭಾರತಕ್ಕೆ ಹಿಂತಿರುಗಿ ,ತಮ್ಮ ಸಂಶೋಧನೆಯನ್ನ ಮೈಸೂರಿನ ಜೆ.ಏಸ್.ಎಸ್ ಉನ್ನತ ಶಿಕ್ಷಣ ಸಂಸ್ಥೆಯ ವೈದ್ಯಕೀಯ ಮಹಾವಿದ್ಯಾಲಯದ ಸೆಂಟರ್ ಆಫ್ ಎಕ್ಸೆಲೆನ್ಸ್ ಇನ್ ಮಾಲಿಕ್ಯುಲರ್ ಬಯಾಲಜಿ ಅಂಡ್ ರಿಜೆನೆರೇಟಿವ್ ಮೆಡಿಸಿನ್ (Center of Excellence in Molecular Biology and Regenerative Medicine (CEMR)) ಮತ್ತು ಜೀವರಸಾಯನ ಶಾಸ್ತ್ರ ವಿಭಾಗದಲ್ಲಿ ಸಹ  ಪ್ರಾಧ್ಯಾಪಕರಾಗಿ ಮುಂದುವರೆಸಿದ್ದಾರೆ.

ಕಳೆದ 15 ವರ್ಷಗಳಿಂದ ಕ್ಯಾನ್ಸರ್ ಅದರಲ್ಲೂ ಲಿವರ್ ಕ್ಯಾನ್ಸರಿಗೆ ಸಂಬಂಧ ಪಟ್ಟ ಹಲವಾರು ಮಹತ್ತರ ಲೇಖನಗಳನ್ನು  ಪ್ರಕಟಿಸಿ ಅಮೆರಿಕಾದಲ್ಲಿ ನೆಲೆಸಿರುವ ಭಾರತೀಯ ಮೂಲದ ಕ್ಯಾನ್ಸರ್ ವಿಜ್ಞಾನಿಗಳ ಒಕ್ಕೂಟದಿಂದ ಯುವ ವಿಜ್ಞಾನಿ ಪ್ರಶಸ್ತಿ, ಅಮೆರಿಕಾದ ಕ್ಯಾನ್ಸರ್ ಅಸೋಸಿಯೇಶನ್ ನಿಂದ ಸ್ಕಾಲರ್ ಇನ್ ಟ್ರೈನಿಂಗ್ ಪ್ರಶಸ್ತಿ, ಮ್ಯಾಸ್ಸಿ ಕ್ಯಾನ್ಸರ್ ಸೆಂಟರಿನಿಂದ ಎಕ್ಸೆಲೆನ್ಸ್ ಇನ್ ಕ್ಯಾನ್ಸರ್ ರಿಸರ್ಚ್ ಅವಾರ್ಡ್ ಪಡೆದಿದ್ದಾರೆ.

ವಿಜ್ಞಾನದ ಜೊತೆಗೆ ಸಾಹಿತ್ಯದಲ್ಲಿಯೂ ಕೂಡ ಅಪಾರ ಆಸಕ್ತಿ ಹೊಂದಿದ್ದಾರೆ. ಇತ್ತೀಚೆಗೆ ಇವರು "ಮಾಯಾಪಂಜರ" ಮತ್ತು "ಎತ್ತಣ ಅಲ್ಲಮ ಎತ್ತಣ ರಮಣ?" ಹೀಗೆ ಕೃತಿಗಳನ್ನು ಪ್ರಕಟಿಸಿದ್ದಾರೆ.

ಪ್ರಸನ್ನ ಸಂತೇಕಡೂರು