About the Author

ಕನ್ನಡದ ಹಿರಿಯ ಹೋರಾಟಗಾರ, ಸಾಹಿತಿ, ರಾ.ನಂ. ಚಂದ್ರಶೇಖರ ಅವರು ಕಳೆದ ಮೂರ್ನಾಲ್ಕು ದಶಕಗಳಿಂದ ಬರವಣಿಗೆಯ ಮೂಲಕ ಕನ್ನಡ ಭಾಷಾ ಹೋರಾಟದಲ್ಲಿ ತೊಡಗಿಕೊಂಡಿದ್ದಾರೆ. ಇವರಿಗೆ ಕರ್ನಾಟಕ ಚೂಡಾಮಣಿ, ಕನ್ನಡ ರತ್ನ ಮುಂತಾದ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿದೆ. ಇವರು ಬರೆದ ಪ್ರಮುಖ ಕೃತಿಗಳೆಂದರೆ ಕನ್ನಡ ಬಾವುಟದ ರೂವಾರಿ, ಹಿಮಾಲಯದಲ್ಲಿ ಕನ್ನಡ ಧ್ಯಾನ, ಕನ್ನಡದ ವೀರ ಸೇನಾನಿ ಮ. ರಾಮಮೂರ್ತಿ, ವಿಮಾನ ಯಾನ ಮುಂತಾದವು. 

ರಾ.ನಂ. ಚಂದ್ರಶೇಖರ್