About the Author

ಕನ್ನಡ ಸಾಹಿತ್ಯ ಕ್ಷೇತ್ರವನ್ನು ಶ್ರೀಮಂತಗೊಳಿಸಲು ಶ್ರಮಿಸಿದ ಬಹುಭಾಷಾ ಪಂಡಿತರ ಪರಂಪರೆಗೆ ಸೇರಿದವರು ಡಾ. ಆರ್. ಶೇಷಶಾಸ್ತ್ರಿ. ಅಧ್ಯಾಪಕ, ಲೇಖಕ, ಅನುವಾದಕ, ಸಂಶೋಧಕರಾಗಿ ಅದರದ್ದು ಬಹುಮುಖ ಪ್ರತಿಭೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಸಂತೇಕಲ್ಲಹಳ್ಳಿ ಶೇಷಶಾಸ್ತ್ರಿಗಳ ಹುಟ್ಟೂರು. ಬೆಂಗಳೂರು ವಿವಿಯಲ್ಲಿ ಕನ್ನಡದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪಿಎಚ್.ಡಿ ಪದವಿ ಪಡೆದ ಅವರು ಸಂಶೋಧಕ ಸಹಾಯಕರಾಗಿ ವೃತ್ತಿ ಬದುಕನ್ನು ಆರಂಭಿಸಿದರು. ಆಂಧ್ರಪ್ರದೇಶದ ಅನಂತಪುರದಲ್ಲಿರುವ ಶ್ರೀಕೃಷ್ಣದೇವರಾಯ ವಿವಿಯಲ್ಲಿ ಕನ್ನಡ ಅಧ್ಯಾಪಕ, ರೀಡರ್, ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸಿ ಆನಂತರದಲ್ಲಿ ತೆಲುಗು ವಿಭಾಗದ ಮುಖ್ಯಸ್ಥರಾದರು ಜೊತೆಗೆ, ಕುಪ್ಪಂನ ದ್ರಾವಿಡ ವಿವಿಯಲ್ಲಿ ಕನ್ನಡ ಮತ್ತು ಅನುವಾದ ವಿಭಾಗದ ಸ್ಥಾಪಕ ಮುಖ್ಯಸ್ಥರಾಗಿ ಮಹತ್ವದ ಸೇವೆ ಸಲ್ಲಿಸಿದ್ದಾರೆ.

ಕನ್ನಡ, ತೆಲುಗು ಮತ್ತು ಇಂಗ್ಲಿಷ್ ನಲ್ಲಿ ಸಮಾನ ಪಾಂಡಿತ್ಯ ಹೊಂದಿರುವ ಅವರು 20ಕ್ಕೂ ಹೆಚ್ಚು ಕೃತಿಗಳನ್ನು ಪ್ರಕಟಿಸಿದ್ದಾರೆ. ಸಂಶೋಧನೆ, ಗ್ರಂಥಸಂಪಾದನೆ, ಅನುವಾದ, ಸಣ್ಣಕತೆಗಳು, ಅಣಕುವಾಡಗಳು ಮತ್ತು ಪುಸ್ತಕ ವಿಮರ್ಶೆಯಲ್ಲಿ ಕ್ಷೇತ್ರಕಾರ್ಯ ನಡೆಸಿ, 150ಕ್ಕೂ ಅಧಿಕ ಸಂಶೋಧನಾ ಲೇಖನಗಳು ಕನ್ನಡ, ತೆಲುಗು ಹಾಗೂ ಇಂಗ್ಲಿಷ್ ನಲ್ಲಿ ಪ್ರಕಟವಾಗಿವೆ. ಡಾ. ತಿಮ್ಮಾವಝಲಕೋದಂಡರಾಮಯ್ಯ ಶ್ರೇಷ್ಠ ಸಂಶೋಧಕ ಪ್ರಶಸ್ತಿ ಹಾಗೂ ಬಿ.ಎನ್.ಶಾಸ್ತ್ರಿ ಪ್ರಶಸ್ತಿಗಳು ಲಭಿಸಿವೆ.

ಆರ್. ಶೇಷಶಾಸ್ತ್ರಿ

BY THE AUTHOR