About the Author

ಕವಿ ರಾಜೇಂದ್ರ ಬುರಡಿಕಟ್ಟಿ ಅವರು 1970 ಜೂನ್ 20ರಂದು ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿನ ಕಡೇನಂದಿಹಳ್ಳಿ ಗ್ರಾಮದಲ್ಲಿ ಜನಿಸಿದರು. ಶಿವಮೊಗ್ಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ತಮ್ಮ ಪ್ರಾರಂಭಿಕ ಶಿಕ್ಷಣ ಪೂರೈಸಿದ ಇವರು ಧಾರವಾಡದ ಕರ್ನಾಟಕ ವಿ.ವಿ.ಯಿಂದ ಬಿ.ಎ ಮತ್ತು ಎಂ.ಎ. ಪದವಿಗಳನ್ನು ಪಡೆದಿದ್ದಾರೆ. ಚನ್ನೈನ ಸಂಸ್ಥೆಯೊಂದರಿಂದ ಕುಟುಂಬ ಜೀವನ ಶಿಕ್ಷಣ ಸ್ನಾತಕೋತ್ತರ ಡಿಪ್ಲೊಮೊ ಪದವಿ ಪಡೆದಿದ್ದಾರೆ. ‘ಆಧುನಿಕ ಕನ್ನಡ ಮಹಾಕಾವ್ಯಗಳನ್ನು ಕುರಿತು ಅವರು ನಡೆಸಿದ ಸಂಶೋಧನೆಗೆ ಡಾಕ್ಟರೇಟ್ ಪದವಿ ದೊರೆತಿದೆ. ಪ್ರಸ್ತುತ ಶಿವಮೊಗ್ಗದಲ್ಲಿ ನೆಲೆಸಿರುವ ಇವರು ವೃತ್ತಿಯಿಂದ ಶಿಕ್ಷಕರು. 

ಸಾಹಿತ್ಯ ಮತ್ತು ಸಂಸ್ಕೃತಿ ಅವರ ಆಸಕ್ತಿಯ ಕ್ಷೇತ್ರ. `ಕೆಮ್ಮುಗಿಲು', `ಗುಲಾಬಿ ಮುಳ್ಳು' `ಯುಗಧರ್ಮ ಮತ್ತು ಆಧುನಿಕ ಕನ್ನಡ ಮಹಾಕಾವ್ಯಗಳು' ಅವರ ಪ್ರಕಟಿತ ಕೃತಿಗಳು. ಅವರಿಗೆ `ಜನಮೆಚ್ಚಿದ ಶಿಕ್ಷಕ'(2002), `ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ'(2003), `ಕರ್ನಾಟಕ ರಾಜ್ಯ ಉತ್ತಮ ಶಿಕ್ಷಕ ಪ್ರಶಸ್ತಿ'(2004), `ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ'(2013), `ವಿಶ್ವ ಮಾದರಿ ಶಿಕ್ಷಕ ಪ್ರಶಸ್ತಿ (2015) ಮುಂತಾದ ಪ್ರಶಸ್ತಿಗಳು ಅವರಿಗೆ ಸಂದಿವೆ.

ರಾಜೇಂದ್ರ ಬುರಡಿಕಟ್ಟಿ

(20 Jun 1970)